ಕರ್ನಾಟಕ

karnataka

ETV Bharat / city

ಮಂಗಳೂರು: 15 ಯಕ್ಷಗಾನ ಕಲಾವಿದರಿಗೆ "ದಶಮಾನೋತ್ಸವ ಪ್ರಶಸ್ತಿ" - ಮಂಗಳೂರು ವಿಶ್ವವಿದ್ಯಾನಿಲಯ

ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರವು ದಶಕದ ಸಂಭ್ರಮದಲ್ಲಿದೆ. ಈ ದಶಮಾನೋತ್ಸವ ಸಮಾರಂಭದಲ್ಲಿ ಯಕ್ಷಗಾನ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ದಶಮಾನೋತ್ಸವ ಪ್ರಶಸ್ತಿ ನೀಡಿ ಗೌರವಿಸಲು ನಿರ್ಧರಿಸಿದೆ.

Dashamanotsava Awards
ಯಕ್ಷಗಾನ ಕಲಾವಿದರು

By

Published : Nov 13, 2021, 9:06 AM IST

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ (Dr. P. Dayananda Pai) ಮತ್ತು ಶ್ರೀ ಪಿ.ಸತೀಶ್ ಪೈ (P. Satish Pai) ಯಕ್ಷಗಾನ ಅಧ್ಯಯನ ಕೇಂದ್ರದ (Yakshagana Study Center) ದಶಮಾನೋತ್ಸವದ ನಿಮಿತ್ತ 15 ಮಂದಿ ಯಕ್ಷಗಾನ ಕಲಾವಿದರಿಗೆ (Yakshagana artists) ʼದಶಮಾನೋತ್ಸವ ಪ್ರಶಸ್ತಿʼ ಘೋಷಣೆ ಮಾಡಲಾಗಿದೆ.

ತೆಂಕು, ಬಡಗು ತಿಟ್ಟಿನ ಹಿಮ್ಮೇಳ ಹಾಗೂ ಮುಮ್ಮೇಳ ಸೇರಿದಂತೆ ಹದಿನೈದು ಮಂದಿ ಕಲಾವಿದರಾದ ಕೊರಗಪ್ಪ ಶೆಟ್ಟಿ, ಪೇತ್ರಿ ಮಾಧವ ನಾಯ್ಕ್, ಮುಖ್ಯಪ್ರಾಣ ಕಿನ್ನಿಗೋಳಿ, ಕೃಷ್ಣ ಯಾಜಿ ಬಳ್ಕೂರು, ಆರ್ಗೋಡು ಮೋಹನ್ ದಾಸ್ ಶೆಣೈ, ಶಿವರಾಮ ಜೋಗಿ, ಪೂಕಳ ಲಕ್ಷ್ಮೀನಾರಾಯಣ ಭಟ್, ಉಬರಡ್ಕ ಉಮೇಶ್ ಶೆಟ್ಟಿ, ಕುಂಬ್ಳೆ ಸುಂದರ್ ರಾವ್ ಹಾಗೂ ಹಿಮ್ಮೇಳ ಕ್ಷೇತ್ರದ ಸಾಧಕರಾದ ಸುಬ್ರಹ್ಮಣ್ಯ ಧಾರೇಶ್ವರ, ಕುರಿಯ ಗಣಪತಿ ಭಟ್ , ಪುತ್ತಿಗೆ ರಘುರಾಮ ಹೊಳ್ಳ, ದಿನೇಶ ಅಮ್ಮಣ್ಣಾಯ, ಪದ್ಯಾಣ ಶಂಕರನಾರಾಯಣ ಭಟ್, ಹರಿನಾರಾಯಣ ಬೈಪಾಡಿತ್ತಾಯ ಅವರಿಗೆ ʼದಶಮಾನೋತ್ಸವ ಪ್ರಶಸ್ತಿ' ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ:Watch... ರಾಜಸ್ಥಾನದಲ್ಲಿ ನಡೆಯಲಿದೆ ಕತ್ರಿನಾ ಕೈಫ್ -ವಿಕ್ಕಿ ಕೌಶಲ್ ಅದ್ಧೂರಿ ವಿವಾಹ..

ಯಕ್ಷಗಾನ ಸಾಹಿತ್ಯ ಕೃತಿಗಳನ್ನು ರಚಿಸಿರುವ ಡಾ.ಉಪ್ಪಂಗಳ ಶಂಕರನಾರಾಯಣ ಭಟ್ ಹಾಗೂ ಡಾ.ಚಂದ್ರಶೇಖರ್ ದಾಮ್ಲೆ ಅವರು ದಶಮಾನೋತ್ಸವದ 'ಕೃತಿ ಪ್ರಶಸ್ತಿ'ಗೆ ಆಯ್ಕೆಯಾಗಿದ್ದಾರೆ. ನವೆಂಬರ್ ಕೊನೆಯ ವಾರದಲ್ಲಿ ನಡೆಯುವ ದಶಮಾನೋತ್ಸವ ಉದ್ಘಾಟನೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ, ಸನ್ಮಾನ ನಡೆಯಲಿದೆ ಎಂದು ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ.ಶ್ರೀಪತಿ ಕಲ್ಲೂರಾಯ ತಿಳಿಸಿದ್ದಾರೆ.

ABOUT THE AUTHOR

...view details