ಮಂಗಳೂರು:ದ.ಕ ಜಿಲ್ಲೆಯ ಏಳು ಖಾಸಗಿ ಆಸ್ಪತ್ರೆಗಳು ಆಯುಷ್ಮಾನ್ ಭಾರತ್ ಮತ್ತು ಆರೋಗ್ಯ ಕರ್ನಾಟಕ ಯೋಜನೆಯಡಿ ಹೆಚ್ಚುವರಿ ಹಣ ಪಾವತಿ ಹಾಗೂ ಚಿಕಿತ್ಸೆಗೆ ನಿರ್ಲಕ್ಷ್ಯ ವಹಿಸಿರುವ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ, ಸಂತ್ರಸ್ತರಿಗೆ ಕೂಡಲೇ ಹಣ ಹಿಂದಿರುಗಿಸಲು ಆಸ್ಪತ್ರೆಗಳಿಗೆ ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾಮಟ್ಟದ ಕುಂದು ಕೊರತೆ ಪರಿಹಾರ ಸಮಿತಿ ಸಭೆಯಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಸಂತ್ರಸ್ತರು ದಾಖಲಿಸಿರುವ ದೂರುಗಳನ್ನು ಆಲಿಸಿದ ಜಿಲ್ಲಾಧಿಕಾರಿ, ಸಂತ್ರಸ್ತ ರೋಗಿಗಳ ಬ್ಯಾಂಕ್ ಖಾತೆಗೆ ಒಂದು ವಾರದೊಳಗೆ ಹಣ ವರ್ಗಾಯಿಸಿ ಸ್ವೀಕೃತಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಲು ಆದೇಶಿಸಿದ್ದಾರೆ.