ಸುಳ್ಯ (ದಕ್ಷಿಣಕನ್ನಡ):ಸುಳ್ಯದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಹಿಂಬದಿಯಲ್ಲಿ ಶುಕ್ರವಾರ ರಾತ್ರಿ ಕತ್ತು ಕೊಯ್ದ ಸ್ಥಿತಿಯಲ್ಲಿ ವ್ಯಕ್ತಿವೋರ್ವನ ಮೃತದೇಹ ಪತ್ತೆಯಾಗಿದೆ.
ಬಸ್ ನಿಲ್ದಾಣದ ಸಿಬ್ಬಂದಿ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರು. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು, ಮೃತದೇಹದ ಬಳಿಯಿದ್ದ ಬ್ಯಾಗ್ ಪರಿಶೀಲಿಸಿದಾಗ ಆಧಾರ್ ಕಾರ್ಡ್ ಸಿಕ್ಕಿದೆ. ಮೃತ ವ್ಯಕ್ತಿ ಮಂಗಳೂರಿನ ಅಚ್ಚುತ ಎಂಬ ಮಾಹಿತಿ ದೊರೆತಿದೆ.