ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು ಓರ್ವ ಕೊರೊನಾ ಸೋಂಕಿತ ಮೃತಪಟ್ಟಿದ್ದು, ಸಾವಿನ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.
ಮಂಗಳೂರಿನಲ್ಲಿಂದು ಕೊರೊನಾಗೆ ಓರ್ವ ಬಲಿ: ಸಾವಿನ ಸಂಖ್ಯೆ 30ಕ್ಕೆ ಏರಿಕೆ
ಮಂಗಳೂರಿನಲ್ಲಿಂದು 49 ವರ್ಷದ ಕೊರೊನಾ ಸೋಂಕಿತ ಮೃತಪಟ್ಟಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.
ಮಂಗಳೂರಿನಲ್ಲಿಂದು ಕೊರೊನಾಗೆ ಓರ್ವ ಬಲಿ...ಸಾವಿನ ಸಂಖ್ಯೆ 30ಕ್ಕೆ ಏರಿಕೆ
ಮಂಗಳೂರಿನ 49 ವರ್ಷದ ವರ್ಷದ ಪುರುಷ ಕೊರೊನಾಗೆ ಬಲಿಯಾಗಿದ್ದಾರೆ. ಇವರು ನ್ಯುಮೋನಿಯಾ, ಯಕೃತ್ ಸಮಸ್ಯೆಯಿಂದ ಬಳಲುತ್ತಿದ್ದರು. ಇವರಿಗೆ ಕೊರೊನಾ ದೃಢಪಟ್ಟ ಹಿನ್ನೆಲೆ ಜುಲೈ 7ರಂದು ವೆನ್ಲಾಕ್ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.