ಪುತ್ತೂರು: ಉಪ್ಪಿನಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆಯನ್ನು ಇಂದಿನಿಂದ ಆರಂಭಿಸಲಾಗಿದೆ.
ಉಪ್ಪಿನಂಗಡಿಯಲ್ಲಿ ಅನಧಿಕೃತ ಅಂಗಡಿಗಳ ತೆರವು ಕಾರ್ಯಾಚರಣೆ
ಉಪ್ಪಿನಂಗಡಿ ಪೇಟೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಹಲವು ಅನಧಿಕೃತ ಅಂಗಡಿಗಳಿದ್ದ ಹಿನ್ನೆಲೆ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.
Uppinagadi
ಉಪ್ಪಿನಂಗಡಿ ಪೇಟೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಹಲವು ಅನಧಿಕೃತ ಅಂಗಡಿಗಳಿದ್ದು, ಇದರ ತೆರವಿಗೆ ಉಪ್ಪಿನಂಗಡಿ ಗ್ರಾ.ಪಂ. ಮೂರು ದಿನಗಳ ಗಡುವು ನೀಡಿತ್ತು. ಇಂದು ಬೆಳಗ್ಗೆ ಆರು ಗಂಟೆಯಿಂದ ಎರಡು ಜೆಸಿಬಿ ಮೂಲಕ ಪೊಲೀಸ್ ಬಂದೋಬಸ್ತ್ ನೊಂದಿಗೆ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.
ಈ ಕಾರ್ಯಾಚರಣೆ ವೇಳೆ, ತಹಶೀಲ್ದಾರ್ ರಮೇಶ್ ಬಾಬು, ತಾ.ಪಂ. ಇಒ ನವೀನ್ ಭಂಡಾರಿ, ಗ್ರಾ.ಪಂ. ವಿಲ್ಪ್ರೆಡ್ ಲಾರೆನ್ಸ್ ರೊಡ್ರಿಗಸ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.