ಮಂಗಳೂರು: ಉತ್ತರ ಕರ್ನಾಟಕ ಭಾಗದಿಂದ ಸಾವಿರಾರು ಸಂಖ್ಯೆಯಲ್ಲಿ ವಲಸೆ ಕಾರ್ಮಿಕರು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ್ದು, ಲಾಕ್ಡೌನ್ ಹಿನ್ನೆಲೆ ಸಾಕಷ್ಟು ತೊಂದರೆ ಅನುಭವಿಸಿದ್ದರು. ಇದೀಗ ಇವರ ಸಮಸ್ಯೆಗೆ ದ.ಕ ಜಿಲ್ಲಾಡಳಿತ ಸ್ಪಂದಿಸಿದ್ದು, ವಸತಿ ವ್ಯವಸ್ಥೆ ಕಲ್ಪಿಸಿದೆ.
ವಲಸೆ ಕಾರ್ಮಿಕರಿಗೆ ವಸತಿ ವ್ಯವಸ್ಥೆ ಕಲ್ಪಿಸಿದ ದ.ಕ ಜಿಲ್ಲಾಡಳಿತ - ವಲಸೆ ಕಾರ್ಮಿಕರಿಗೆ ವಸತಿ ವ್ಯವಸ್ಥೆ ಕಲ್ಪಿಸಿದ ಜಿಲ್ಲಾಡಳಿತ
ವಲಸೆ ಕಾರ್ಮಿಕರ ಮನವಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಸ್ಪಂದಿಸಿದ್ದು, ಕಾರ್ಮಿಕರಿಗೆ ವಸತಿ ವ್ಯವಸ್ಥೆ ಕಲ್ಪಿಸಿದೆ.
ಮಂಗಳೂರಲ್ಲಿ ಸಾಂತ್ವನ ಕೇಂದ್ರ ಪ್ರಾರಂಭ
ಜಿಲ್ಲಾಡಳಿತ ವಲಸೆ ಕಾರ್ಮಿಕರಿಗೆ ಶಾಲೆ, ಹಾಸ್ಟೆಲ್ಗಳಲ್ಲಿ ಸಾಂತ್ವನ ಕೇಂದ್ರ ತೆರೆದಿದೆ. ದಕ್ಷಿಣ ಕನ್ನಡದಲ್ಲಿರುವ ವಲಸೆ ಕಾರ್ಮಿಕರನ್ನು ಇಲ್ಲಿಗೆ ಕರೆದುಕೊಂಡು ಬಂದು ವಸತಿ, ಊಟ, ತಿಂಡಿ, ವೈದ್ಯಕೀಯ ವ್ಯವಸ್ಥೆಯನ್ನು ಸರ್ಕಾರದಿಂದಲೇ ಮಾಡಲಾಗಿದೆ. ಈ ಮೂಲಕ ನೊಂದವರ ಸಂಕಷ್ಟಕ್ಕೆ ಜಿಲ್ಲಾಡಳಿತ ಸ್ಪಂದಿಸಿದೆ.
ಒಟ್ಟಿನಲ್ಲಿ ಸಾಂತ್ವನ ಕೇಂದ್ರದಲ್ಲಿರುವ ಕಾರ್ಮಿಕರಿಗೆ ಯಾವಾಗ ಊರಿಗೆ ಹೋಗುವುದು ಎಂಬ ಚಿಂತೆ ಕಾಡುತ್ತಿದ್ದು, ಜಿಲ್ಲಾಡಳಿತಕ್ಕೆ ಕಾರ್ಮಿಕರು ಧನ್ಯವಾದ ಸಲ್ಲಿಸಿದ್ದಾರೆ.