ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ನಾಳೆ(ಆಗಸ್ಟ್ 7) ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಪ್ರಕಟಣೆ ಹೊರಡಿಸಿದ್ದಾರೆ.
ದಯವಿಟ್ಟು ಗಮನಿಸಿ... ಭಾರಿ ಮಳೆ ಹಿನ್ನೆಲೆ, ನಾಳೆ ಶಾಲಾ-ಕಾಲೇಜುಗಳಿಗೆ ರಜೆ - ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ರೆಡ್ ಅಲರ್ಟ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 7 ಮತ್ತು 8 ರಂದು ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
![ದಯವಿಟ್ಟು ಗಮನಿಸಿ... ಭಾರಿ ಮಳೆ ಹಿನ್ನೆಲೆ, ನಾಳೆ ಶಾಲಾ-ಕಾಲೇಜುಗಳಿಗೆ ರಜೆ](https://etvbharatimages.akamaized.net/etvbharat/prod-images/768-512-4059097-thumbnail-3x2-mng.jpg)
ಆಗಸ್ಟ್ 7 ಮತ್ತು 8ರಂದು ದ.ಕ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರಗಳಿಗೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇನ್ನು ಮೂರು ದಿನಗಳ ಕಾಲ ಮೀನುಗಾರಿಕೆಗೆ ತೆರಳದಂತೆ ಸೂಚಿಸಿದ್ದಾರೆ. ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.