ಕರ್ನಾಟಕ

karnataka

ETV Bharat / city

ಅಹಮದಾ​​ಬಾದ್​ನ ಕಹಿ ಘಟನೆ: ಕೊರೊನಾ ಆಸ್ಪತ್ರೆಗಳಲ್ಲಿ ಅಗ್ನಿ ಸುರಕ್ಷತೆಗೆ ಒತ್ತು

ಕೊರೊನಾ ಆಸ್ಪತ್ರೆಗಳಲ್ಲಿ ಅಗ್ನಿ ಅವಘಡಗಳು ಸಂಭವಿಸದಂತೆ ಆರೋಗ್ಯ ಇಲಾಖೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ರೋಗಿಗಳ ಸುರಕ್ಷತೆಗೆ ಹೆಚ್ಚು ಒತ್ತು ನೀಡಿದೆ.

Emphasis on fire safety
ಕೊರೊನಾ ಆಸ್ಪತ್ರೆಗಳಲ್ಲಿ ಅಗ್ನಿ ಸುರಕ್ಷತೆಗೆ ಒತ್ತು

By

Published : Aug 21, 2020, 2:18 PM IST

Updated : Aug 21, 2020, 3:09 PM IST

ಮಂಗಳೂರು: ಅಹಮದಾಬಾದ್​​ನಲ್ಲಿ ಇತ್ತೀಚಿಗೆ ಸಂಭವಿಸಿದ ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿದುರಂತದ ಕಹಿಘಟನೆ ಹಿನ್ನೆಲೆಯಲ್ಲಿ ಮಂಗಳೂರಿನ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಅಗ್ನಿ ಅನಾಹುತ ಸಂಬಂಧಿಸಿದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.

ಆಸ್ಪತ್ರೆಗಳಲ್ಲಿ ಸಂಭವಿಸುವ ಅಗ್ನಿ ದುರಂತಗಳಿಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದಿರುವುದೇ ಅದಕ್ಕೆ ಕಾರಣ. ಎಷ್ಟೋ ಆಸ್ಪತ್ರೆಗಳು ಎನ್​ಒಸಿ ಮತ್ತು ಸುರಕ್ಷತಾ ಪ್ರಮಾಣ ಪತ್ರ ಪಡೆಯದೇ ಕಾರ್ಯ ನಿರ್ವಹಿಸುತ್ತಿವೆ. ಹೀಗಾಗಿ, ಈ ರೀತಿ ಅವಘಡಗಳು ಜರುಗುತ್ತಿವೆ. ಇತ್ತ ಆಸ್ಪತ್ರೆಗಳ ಮಾಲೀಕರ ನಿರ್ಲಕ್ಷ್ಯವೂ ಇದರಲ್ಲಿ ಅಡಗಿದೆ.

ಎಲ್ಲ ಖಾಸಗಿ ಆಸ್ಪತ್ರೆಗಳು ಕರ್ನಾಟಕ ಪ್ರೈವೇಟ್ ಮೆಡಿಕಲ್ ಎಸ್ಟಾಬ್ಲಿಷ್​ಮೆಂಟ್ ಕಾಯ್ದೆಯಡಿ ನೋಂದಣಿಯಾಗುತ್ತವೆ. ಅದಕ್ಕೂ ಮುಂಚೆಯೇ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಿಂದ ಅಗ್ನಿ ಸುರಕ್ಷತೆ ಪರವಾನಗಿ ಪಡೆಯಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ರಾಜ್ಯ ಸರ್ಕಾರ ನೀಡುವ ನಿರ್ದೇಶನದಂತೆ ಅಗ್ನಿ ಸುರಕ್ಷತೆ ಇರಲಿದೆ ಎಂದು ದ.ಕ ಜಿಲ್ಲಾ ಆರೋಗ್ಯಾಧಿಕಾರಿ ರಾಮಚಂದ್ರ ಬಾಯರಿ ಮಾಹಿತಿ ನೀಡಿದರು.

ಕೊರೊನಾ ಆಸ್ಪತ್ರೆಗಳಲ್ಲಿ ಅಗ್ನಿ ಸುರಕ್ಷತೆಗೆ ಒತ್ತು

ಜಿಲ್ಲೆಯ ಕೊರೊನಾ ಆಸ್ಪತ್ರೆಗಳಲ್ಲಿ ದುರಂತ ಸಂಭವಿಸದಂತೆ ಅಗ್ನಿ ಸುರಕ್ಷತೆಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹಳೆಯ ಆಸ್ಪತ್ರೆಗಳ ಕಟ್ಟಡಗಳಲ್ಲಿ ಅಗ್ನಿ ಸುರಕ್ಷತೆ ಕಡ್ಡಾಯವಿರಲಿಲ್ಲ. 2011ರ ಬಳಿಕ ನಿರ್ಮಾಣವಾದ ಆಸ್ಪತ್ರೆಗಳು ಎನ್​​ಒಸಿ ಪಡೆಯಬೇಕಿದೆ. ಅದಕ್ಕೆ ಮೊದಲು ನಿರ್ಮಿಸಿದ ಆಸ್ಪತ್ರೆಗಳಿಗೆ ನೋಟಿಸ್ ನೀಡಿ ಅಗ್ನಿ ಸುರಕ್ಷತೆ ಅಳವಡಿಸುವಂತೆ ಸೂಚಿಸಲಾಗಿದೆ ಎನ್ನುತ್ತಾರೆ ಮುಖ್ಯ ಅಗ್ನಿಶಾಮಕ ಅಧಿಕಾರಿ ತಿಪ್ಪೇಸ್ವಾಮಿ.

Last Updated : Aug 21, 2020, 3:09 PM IST

ABOUT THE AUTHOR

...view details