ಮಂಗಳೂರು(ದಕ್ಷಿಣ ಕನ್ನಡ):ಮಂಗಳೂರಿನ ಜೆಬಿಎಫ್ ಕಂಪೆನಿ ಬಂದ್ ಆಗಿದ್ದು, ಈ ಸಂಸ್ಥೆಗಾಗಿ ಭೂಮಿಯನ್ನು ಕಳೆದುಕೊಂಡ ಸಂತ್ರಸ್ತರಿಗೆ ತಾತ್ಕಾಲಿಕವಾಗಿ ಎಂಆರ್ಪಿಎಲ್ ನಲ್ಲಿ ಉದ್ಯೋಗ ನೀಡುವ ಭರವಸೆಯನ್ನು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ನೀಡಿದ್ದಾರೆ.
ಇಂದು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಮಂಗಳೂರಿಗೆ ಬಂದಿದ್ದ ಸಚಿವ ನಿರಾಣಿಯವರನ್ನು ಸಂತ್ರಸ್ತರು ಭೇಟಿ ಮಾಡಿ ತಮ್ಮ ಅಹವಾಲು ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವರು ಉದ್ಯೋಗದ ಭರವಸೆ ನೀಡಿದರು. ವಿಶೇಷ ಆರ್ಥಿಕ ವಲಯಕ್ಕಾಗಿ ಭೂಮಿ ನೀಡಿದ ಸಂತ್ರಸ್ತರಿಗೆ ಒಪ್ಪಂದದಂತೆ ಜೆಬಿಎಫ್ ಕಂಪೆನಿಯಲ್ಲಿ ಉದ್ಯೋಗ ನೀಡಲಾಗಿತ್ತು. ಆದರೆ ಕಾಮಗಾರಿ ಪೂರ್ತಿಗೊಳಿಸದೇ ಈ ಕಂಪೆನಿ ಆರ್ಥಿಕ ಮುಗ್ಗಟ್ಟಿನಿಂದ ಬಂದ್ ಆಯಿತು.