ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಸದಸ್ಯ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಇಂದು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಭೇಟಿ ನೀಡಿ ಮೃತರ ಪತ್ನಿಗೆ ಸಾಂತ್ವನ ಹೇಳಿದರು. ಘಟನೆಗೆ ಸಂಬಂಧಿಸಿದಂತೆ ಬೆಳ್ಳಾರೆ, ಕಡಬ, ಸುಳ್ಯದಲ್ಲಿಂದು ಕೂಡ ಪೊಲೀಸ್ ಬಂದೋಬಸ್ತ್ ಮುಂದುವರೆದಿದೆ. ಆರೋಪಿಗಳ ಬಂಧನವಾಗಿದೆ ಎಂಬ ಊಹಾಪೋಹಗಳು ಹರಿದಾಡುತ್ತಿದ್ದು, ಪೊಲೀಸರು ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.
ಪ್ರಕರಣದಲ್ಲಿ ಈಗಾಗಲೇ ಹಲವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಎಡಿಜಿಪಿ ಅಲೋಕ್ ಕುಮಾರ್ ಸೇರಿದಂತೆ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಬೀಡು ಬಿಟ್ಟಿದ್ದು, ಮಾಹಿತಿ ಕಲೆ ಹಾಕುತ್ತಿದ್ದಾರೆ.