ಮಂಗಳೂರು: ಸರ್ಕಾರದ ಆದೇಶದಂತೆ ಮಂಗಳೂರು ವಿವಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸ್ನಾತಕ ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೋಮಾದ ಅಂತಿಮ ವರ್ಷದ ತರಗತಿಗಳನ್ನು ಕೋವಿಡ್ ನಿಯಮದಂತೆ ನ. 17ರಿಂದ ಆರಂಭಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಮಂಗಳೂರು ವಿವಿ ಕುಲಪತಿ ಪಿ.ಎಸ್.ಯಡಪಡಿತ್ತಾಯ ತಿಳಿಸಿದರು.
ಮಂಗಳೂರು ವಿವಿ ಸ್ನಾತಕ, ಸ್ನಾತಕೋತ್ತರ ಪದವಿ, ಡಿಪ್ಲೋಮಾದ ಅಂತಿಮ ವರ್ಷದ ತರಗತಿಗಳು ನ. 17ರಿಂದ ಆರಂಭ
ಮಂಗಳೂರು ವಿವಿ ವ್ಯಾಪ್ತಿಯಡಿಯಲ್ಲಿ ಬರುವ ಎಲ್ಲಾ ಸ್ನಾತಕ ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೋಮಾದ ಅಂತಿಮ ವರ್ಷದ ತರಗತಿಗಳನ್ನು ಕೋವಿಡ್ ನಿಯಮದಂತೆ ನ. 17ರಿಂದ ಆರಂಭಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಮಂಗಳೂರು ವಿವಿ ಕುಲಪತಿ ಪಿ.ಎಸ್.ಯಡಪಡಿತ್ತಾಯ ತಿಳಿಸಿದರು.
ಮಂಗಳೂರು ವಿವಿ
ಇಂದು ನಡೆದ ಸಿಂಡಿಕೇಟ್ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ಈವರೆಗೆ ಆನ್ಲೈನ್ ತರಗತಿಗಳು ನಡೆಯುತ್ತಿದ್ದು, ಇನ್ನು ಮುಂದೆ ಭೌತಿಕ ತರಗತಿಗಳು ನಡೆಯಲಿವೆ. ಕೋವಿಡ್ ನಿಯಮದಂತೆ ಬ್ಯಾಚ್ ಅಥವಾ ಇನ್ನಿತರ ಯಾವುದೇ ರೀತಿಯಲ್ಲಿ ತರಗತಿ ನಡೆಸುವ ಕಾರ್ಯ ಆಯಾ ಕಾಲೇಜಿಗೆ ಸಂಬಂಧಿಸಿದ್ದು ಎಂದು ತಿಳಿಸಿದರು.
ಕೋವಿಡ್ ನಿಯಮದಂತೆ ತರಗತಿಗಳು ನಡೆಸಲು ಮಾಸ್ಕ್, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ ಎಂದು ಹೇಳಿದರು.