ಮಂಗಳೂರು: ದ.ಕ. ಜಿಲ್ಲೆಯ ಕಡಂದಲೆಯಲ್ಲಿ ಕ್ವಾರೆಂಟೈನ್ ಕೇಂದ್ರದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಕೊರೊನಾ ಪೀಡಿತನ ಅಂತ್ಯ ಸಂಸ್ಕಾರವನ್ನು ನಗರದ ಬೋಳೂರು ವಿದ್ಯುತ್ ಚಿತಾಗಾರದಲ್ಲಿ ನೆರವೇರಿಸಲಾಯಿತು.
ಬೋಳೂರು ವಿದ್ಯುತ್ ಚಿತಾಗಾರದಲ್ಲಿ ಕೊರೊನಾ ಸೋಂಕಿತನ ಅಂತ್ಯ ಸಂಸ್ಕಾರ - Funeral of Corona Infected at Bolur
ಮಂಗಳೂರಿನ ಬೋಳೂರು ವಿದ್ಯುತ್ ಚಿತಾಗಾರದಲ್ಲಿ ಕೊರೊನಾ ಸೋಂಕಿತನ ಅಂತ್ಯ ಸಂಸ್ಕಾರ ಮಾಡಲಾಯಿತು.
![ಬೋಳೂರು ವಿದ್ಯುತ್ ಚಿತಾಗಾರದಲ್ಲಿ ಕೊರೊನಾ ಸೋಂಕಿತನ ಅಂತ್ಯ ಸಂಸ್ಕಾರ ಕೊರೊನಾ ಸೋಂಕಿತನ ಅಂತ್ಯಸಂಸ್ಕಾರ](https://etvbharatimages.akamaized.net/etvbharat/prod-images/768-512-7310380-424-7310380-1590168735469.jpg)
ಕೊರೊನಾ ಸೋಂಕಿತನ ಅಂತ್ಯಸಂಸ್ಕಾರ
ಮೇ 20 ರಂದು ರಾತ್ರಿ ಮುಂಬೈನಿಂದ ಆಗಮಿಸಿದ್ದ 58 ವರ್ಷದ ಈ ವ್ಯಕ್ತಿ ಕ್ವಾರೆಂಟೈನ್ ಆಗಿದ್ದರು. ಆದರೆ ಗುರುವಾರ ಬೆಳಿಗ್ಗೆ ಕ್ವಾರೆಂಟೈನ್ ಕೇಂದ್ರದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಬಳಿಕ ಇವರ ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಯ ಶವಗಾರದಲ್ಲಿರಿಸಿ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಇಂದು ಇವರ ವರದಿ ಬಂದಿದ್ದು, ಈ ವ್ಯಕ್ತಿಗೆ ಕೊರೊನಾ ಇರುವುದು ದೃಢಪಟ್ಟಿದೆ.
ಇದೀಗ ಅವರ ಮನೆಯವರಿಗೆ ಮೃತದೇಹದ ದರ್ಶನ ಮಾಡಿಸಿ, ಅಧಿಕಾರಿಗಳ ಸಮಕ್ಷಮ ಬೋಳೂರಿನ ವಿದ್ಯುತ್ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.