ಮಂಗಳೂರು:ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮೂರು ವಿವಿಧ ಪ್ರಕರಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಚಿನ್ನಾಭರಣವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಮಂಗಳೂರು ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಬೇಟೆ: ಒಂದೂವರೆ ಕೆಜಿ ಅಕ್ರಮ ಚಿನ್ನ ವಶಕ್ಕೆ - ಮಂಗಳೂರು ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಬೇಟೆ
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಚಿನ್ನಾಭರಣವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಮೂರು ಪ್ರಕರಣಗಳಲ್ಲಿ ಒಟ್ಟು 63 ಲಕ್ಷದ 73 ಸಾವಿರ ಮೌಲ್ಯದ 1 ಕೆ ಜಿ 575 ಗ್ರಾಂ ವಶಪಡಿಸಿಕೊಳ್ಳಲಾಗಿದೆ. ಜನವರಿ 6 ರಂದು ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಬಂದ ಪ್ರಯಾಣಿಕನಿಂದ 336.7 ಗ್ರಾಂ ಚಿನ್ನವನ್ನು ಅಕ್ರಮವಾಗಿ ಸಾಕ್ಸ್ ನಲ್ಲಿ ಅಡಗಿಸಿಟ್ಟು ತಂದಿದ್ದ. ಇದರ ಮೌಲ್ಯ 13.43 ಲಕ್ಷ ಎಂದು ಅಂದಾಜಿಸಲಾಗಿದೆ.
ಜನವರಿ 7 ರಂದು ದುಬೈನಿಂದ ಬಂದಿದ್ದ ಏರ್ ಇಂಡಿಯಾ ವಿಮಾನದಲ್ಲಿದ್ದ ಇಬ್ಬರು ಪ್ರಯಾಣಿಕರಿಂದ ಅಕ್ರಮ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಓರ್ವ ಪ್ರಯಾಣಿಕನಿಂದ ಪೇಸ್ಟ್ ರೂಪದಲ್ಲಿದ್ದ 21.24 ಲಕ್ಷ ರೂ. ಮೌಲ್ಯದ 523 ಗ್ರಾಂ ಚಿನ್ನ ವಶಪಡಿಸಿಕೊಂಡಿದ್ದರೆ, ಮತ್ತೋರ್ವ ಪ್ರಯಾಣಿಕನಿಂದ 29.06 ಲಕ್ಷ ರೂ. ಮೌಲ್ಯದ 716 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಅಕ್ರಮ ಚಿನ್ನ ವಶಪಡಿಸಿಕೊಂಡ ಕಸ್ಸಮ್ಸ್ ಅಧಿಕಾರಿಗಳು ಮೂವರು ಪ್ರಯಾಣಿಕರನ್ನು ಬಂಧಿಸಿದ್ದಾರೆ.