ಪುತ್ತೂರು:ಚಿನ್ನಾಭರಣ ಖರೀದಿಸುವ ಗ್ರಾಹಕರ ಸೋಗಿನಲ್ಲಿ ಪುತ್ತೂರು ಹಿಂದೂಸ್ತಾನ್ ಕಮರ್ಶಿಯಲ್ ಕಾಂಪ್ಲೆಕ್ಸ್ನಲ್ಲಿರುವ ಜೋಸ್ ಆಲುಕ್ಕಾಸ್ಗೆ ಸೆ.1 ರಂದು ಬಂದ ಮೂವರು ಮಹಿಳೆಯರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ದಾವಣಗೆರೆ ಜಿಲ್ಲೆಯ ನಿವಾಸಿಗಳಾದ ಬೀಬಿಜಾನ್, ಹುಸೇನ್ ಬಿ, ಜೈತುಂಬಿ ಬಂಧಿತ ಆರೋಪಿಗಳು. ಗ್ರಾಹಕರ ಸೋಗಿನಲ್ಲಿ ಚಿನ್ನದ ಅಂಗಡಿಗೆ ಬಂದಿದ್ದ ಇವರು, ಸುಮಾರು 50.242 ಗ್ರಾಂ ತೂಕದ 2,60,400 ರೂ. ಮೌಲ್ಯದ ಚಿನ್ನಾಭರಣವನ್ನು ಕಳವು ಮಾಡಿ, ಪರಾರಿಯಾಗಿದ್ದರು.