ನೆಲ್ಯಾಡಿ(ದಕ್ಷಿಣ ಕನ್ನಡ):ಗೋಳಿತ್ತೊಟ್ಟು ಗ್ರಾಮ ಪಂಚಾಯತ್ ಸದಸ್ಯ ಡೆಬ್ಬೇಲಿ ನಿವಾಸಿ ಮಹೇಶ್ (27) ನ.27ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ. ಇವರು ಶಂಕಿತ ಇಲಿ ಜ್ವರದಿಂದ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಗೋಳಿತ್ತೊಟ್ಟು ಗ್ರಾ.ಪಂ ಸದಸ್ಯ ನಿಧನ: ಇಲಿ ಜ್ವರ ಶಂಕೆ - ಡೆಬ್ಬೇಲಿ ನಿವಾಸಿ ಮಹೇಶ್ ನಿಧನ
ಡೆಬ್ಬೇಲಿ ನಿವಾಸಿ ಮಹೇಶ್ ನವೆಂಬರ್ 27ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ. ಇವರು ಇಲಿ ಜ್ವರದಿಂದ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.
ಡೆಬ್ಬೇಲಿ ನಿವಾಸಿ ಮಹೇಶ್
ಮಹೇಶ್ ಅವರಿಗೆ ಕೆಲ ದಿನದ ಹಿಂದೆ ತೀವ್ರ ಜ್ವರ ಕಾಣಿಸಿಕೊಂಡಿತ್ತು. ಜ್ವರ ಉಲ್ಬಣಗೊಂಡ ಹಿನ್ನೆಲೆ ನ.26ರಂದು ಸಂಜೆ ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ನಂತರ ರಾತ್ರಿ ವೇಳೆ ಅಲ್ಲಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಕರೆದೊಯ್ಯಲಾಯಿತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದ ಅವರು ನ.27ರಂದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತ ಮಹೇಶ್‌ರವರಿಗೆ ಅವರಿಗೆ ವಿವಾಹ ನಿಶ್ಚಯವಾಗಿದ್ದು, ಮುಂದಿನ ಜನವರಿಯಲ್ಲಿ ಮದುವೆ ಕಾರ್ಯಕ್ರಮ ನಡೆಯಬೇಕಿತ್ತು.