ಪುತ್ತೂರು(ದಕ್ಷಿಣ ಕನ್ನಡ) :ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸೋಮವಾರ ಪುತ್ತೂರಿನ ನೆಹರುನಗರದ ಮಾಸ್ಟರ್ ಪ್ಲಾನರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಭಾಗದ ಗ್ರಾಮೀಣ ಪ್ರದೇಶದ ಬಡ ಮಹಿಳೆಯರಿಗೆ ಉದ್ಯೋಗ ನೀಡುವಲ್ಲಿ, ಸಾವಿರಕ್ಕೂ ಅಧಿಕ ಕುಟುಂಬಗಳ ಭದ್ರತೆಗೆ ಕಾರಣವಾದ ಮಾಸ್ಟರ್ ಪ್ಲಾನರಿಯಂತಹ ಸಂಸ್ಥೆ ಮೆಚ್ಚುಗೆಗೆ ಪಾತ್ರವಾಗಿದೆ. ಈ ನಿಟ್ಟಿನಲ್ಲಿ ಸಂಸ್ಥೆಗೆ ಭೇಟಿ ನೀಡಿದ್ದೇನೆ ಎಂದು ತಿಳಿಸಿದರು.
ಕಾಳಿಸ್ವಾಮಿ ಅವರ ಹೇಳಿಕೆಯ ಬಗ್ಗೆ ಮಾತನಾಡಿ, ಹತ್ಯೆ ಮಾಡಿದವರ ತಲೆ ಕಡಿಯುತ್ತೇವೆ ಎಂದು ಪ್ರತಿಕ್ರಿಯಿವುದು ಸ್ವಾಮೀಜಿಗಳ ಲಕ್ಷಣವಲ್ಲ. ಸ್ವಾಮೀಜಿಗಳು ಅನಾಗರಿಕರಂತೆ ವರ್ತಿಸುತ್ತಿದ್ದಾರೆ. ಸಮಾಜದ ಕಲುಷಿತ ವಾತಾವರಣಕ್ಕೆ ಕಾರಣಕರ್ತರಾಗಿದ್ದಾರೆ ಎಂದು ಕಿಡಿಕಾರಿದರು.