ಕರ್ನಾಟಕ

karnataka

ETV Bharat / city

ಕೊರೊನಾ ಶಂಕೆ: ಮಂಗಳೂರಲ್ಲಿ 211 ಮಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ

ಈ ಹಿಂದೆ ಕಳುಹಿಸಲಾದ 90 ಮಂದಿಯ ಗಂಟಲು ದ್ರವದ ಪರೀಕ್ಷೆ ವರದಿಯಲ್ಲಿ 89 ನೆಗೆಟಿವ್, 1 ಪಾಸಿಟಿವ್ ಬಂದಿದೆ. ಈವರೆಗೆ 1446 ಮಂದಿಯ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಇದರಲ್ಲಿ 18 ಪಾಸಿಟಿವ್ ಮತ್ತು 1428 ನೆಗೆಟಿವ್ ಬಂದಿವೆ. ಇಂದು 78 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, ಈವರೆಗೆ ಒಟ್ಟು 39464 ಮಂದಿಯನ್ನು ಸ್ಕ್ರೀನಿಂಗ್ ಮಾಡಿದಂತಾಗಿದೆ.

Health Bulletin Release 211 Throat Fluid Examination
ದ.ಕ. ಹೆಲ್ತ್ ಬುಲೆಟಿನ್ ಇಂದು 211 ಮಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ..!

By

Published : Apr 25, 2020, 9:33 PM IST

ಮಂಗಳೂರು: ಕೊರೊನಾ ಶಂಕೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 211 ಮಂದಿಯ ಗಂಟಲು ದ್ರವ ಮಾದರಿಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಒಟ್ಟು 584 ಮಂದಿಯ ವರದಿ ನಿರೀಕ್ಷಿಸಲಾಗುತ್ತಿದೆ.

ಈ ಹಿಂದೆ ಕಳುಹಿಸಲಾದ 90 ಮಂದಿಯ ಗಂಟಲು ದ್ರವದ ಪರೀಕ್ಷೆ ವರದಿಯಲ್ಲಿ 89 ನೆಗೆಟಿವ್, 1 ಪಾಸಿಟಿವ್ ಬಂದಿದೆ. ಈವರೆಗೆ 1446 ಮಂದಿಯ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಇದರಲ್ಲಿ 18 ಪಾಸಿಟಿವ್ ಮತ್ತು 1428 ನೆಗೆಟಿವ್ ಬಂದಿವೆ. ಇಂದು 78 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, ಈವರೆಗೆ ಒಟ್ಟು 39464 ಮಂದಿಯನ್ನು ಸ್ಕ್ರೀನಿಂಗ್ ಮಾಡಿದಂತಾಗಿದೆ.

ಇಎಸ್ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್​ನಲ್ಲಿದ್ದ 10 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 49 ಮಂದಿ ಎನ್​ಐಟಿಕೆ ಕ್ವಾರಂಟೈನ್​ನಲ್ಲಿ ಇದ್ದಾರೆ. ಇಂದಿಗೆ 6073 ಮಂದಿ 28 ದಿನದ ಹೋಮ್ ಕ್ವಾರಂಟೈನ್ ಪೂರೈಸಿದ್ದಾರೆ. ಕೊರೊನಾ ಪಾಸಿಟಿವ್ ಬಂದಿದ್ದ 12 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ನಾಲ್ಕು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ABOUT THE AUTHOR

...view details