ಸುಳ್ಯ(ದಕ್ಷಿಣ ಕನ್ನಡ):ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಕೊಡಗು ಜಿಲ್ಲೆಯ ಮಡಿಕೇರಿಯಿಂದ ನಿರ್ಗಮಿಸಲಿರುವ ಅವರು, ರಸ್ತೆ ಮಾರ್ಗವಾಗಿ ಸುಳ್ಯಕ್ಕೆ ಆಗಮಿಸುವರು. ಈ ಸಂದರ್ಭದಲ್ಲಿ ಮಳೆಬಾಧಿತ, ತಾಲೂಕಿನ ಗಡಿಪ್ರದೇಶ ಸಂಪಾಜೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಇಲ್ಲಿ ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳು ಭೂಕಂಪನದ ಬಗ್ಗೆ ವರದಿ ನೀಡಲಿದ್ದಾರೆ. ನಂತರ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ಸಂಗಮ ಸ್ಥಳದ ನದಿ ಮಟ್ಟದ ವೀಕ್ಷಣೆ ಮತ್ತು ಬೆಳೆಹಾನಿ ಪರಿಶೀಲನೆ ನಡೆಸುವರು. ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮದಲ್ಲಿ ಭೂಕುಸಿತ ಉಂಟಾದ ಪ್ರದೇಶಕ್ಕೆ ಭೇಟಿ ನೀಡುವ ಕಾರ್ಯಕ್ರಮವಿದೆ.