ಮಂಗಳೂರು: ಚಂಡಮಾರುತದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ನಾಳೆ ಜಿಲ್ಲೆಯ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ರಜೆ ಘೋಷಿಸಿದ್ದಾರೆ.
ಭಾರಿ ಮಳೆ ಸಾಧ್ಯತೆ: ನಾಳೆ ದ.ಕ. ಜಿಲ್ಲೆಯ ಶಾಲೆಗಳು, ಪಿಯು ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ಜಿಲ್ಲೆಯ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ರಜೆ ಘೋಷಿಸಿದ್ದಾರೆ. ಅಲ್ಲದೆ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ, ಸಮುದ್ರ ತೀರಗಳಿಗೆ ಮಕ್ಕಳು ಹೋಗದಂತೆ ಎಚ್ಚರ ವಹಿಸಬೇಕೆಂದು ಪಾಲಕರಿಗೆ ಸೂಚಿಸಲಾಗಿದೆ.
ಜಿಲ್ಲಾಧಿಕಾರಿ ಸಿಂಧೂ ರೂಪೇಶ್
ಹವಾಮಾನ ಇಲಾಖೆ ಸೂಚನೆಯಂತೆ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿತ್ತು. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಅಲ್ಲದೆ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ, ಸಮುದ್ರ ತೀರಗಳಿಗೆ ಮಕ್ಕಳು ಹೋಗದಂತೆ ಎಚ್ಚರ ವಹಿಸಬೇಕೆಂದು ಪಾಲಕರಿಗೆ ಸೂಚಿಸಲಾಗಿದೆ.