ಸುಳ್ಯ (ದಕ್ಷಿಣ ಕನ್ನಡ):ಜಿಲ್ಲೆಯಲ್ಲಿವರುಣನ ಆರ್ಭಟ ಮುಂದುವರಿದ ಹಿನ್ನೆಲೆಯಲ್ಲಿ ಸುಳ್ಯ ತಾಲೂಕಿನಲ್ಲಿ ಇಂದು ಶಾಲೆಗಳಿಗೆ ರಜೆ ನೀಡಲಾಗಿದೆ. ಕಡಬ ತಾಲೂಕಿನಲ್ಲಿ ಬೆಳಗಿನ ಸ್ಥಿತಿಗತಿ ನೋಡಿ ರಜೆ ನೀಡುವಂತೆ ಸ್ಥಳೀಯ ತಹಶೀಲ್ದಾರ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಅನುಮತಿ ನೀಡಲಾಗಿದೆ.
ಸುಳ್ಯ ತಾಲೂಕಿನಾದ್ಯಂತ ರಾತ್ರಿ ಧಾರಾಕಾರ ಮಳೆಯಾಗುತ್ತಿದೆ. ಹಲವೆಡೆ ರಸ್ತೆ, ಸೇತುವೆಗಳು ಒಡೆದು ಭೂಕುಸಿತ ಉಂಟಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸುಳ್ಯ ತಾಲೂಕಿನ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆಗಳಿಗೆ ಗುರುವಾರ ರಜೆ ಘೋಷಿಸಲಾಗಿದೆ. ಆದರೆ ಕಡಬ ಮತ್ತು ಇತರೆ ತಾಲೂಕುಗಳಲ್ಲಿ ಅಗತ್ಯವಿದ್ದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸ್ಥಳೀಯ ತಹಶೀಲ್ದಾರರು ಸ್ಥಳೀಯವಾಗಿ ನಿರ್ಣಯ ಕೈಗೊಳ್ಳಬಹುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಜಿಲ್ಲಾಧಿಕಾರಿಗಳಾದ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.
(ಇದನ್ನೂ ಓದಿ: ಸುಳ್ಯ: ಭಾರಿ ಮಳೆಗೆ ಗುಡ್ಡ ಕುಸಿತ, ನದಿ ದಡದಲ್ಲಿ ದೈತ್ಯ ಮೊಸಳೆ ಪ್ರತ್ಯಕ್ಷ)