ಕರ್ನಾಟಕ

karnataka

ETV Bharat / city

ಮಂಗಳೂರಲ್ಲಿ ಹಿಜಾಬ್ ವಿವಾದ: ಕಾಲೇಜಿನಿಂದ ಟಿಸಿ ಪಡೆಯಲು ಮುಂದಾದ ವಿದ್ಯಾರ್ಥಿನಿಯರು

ಹಿಜಾಬ್ ಬಿಟ್ಟು ಇತ್ತೀಚೆಗೆ ಮಂಗಳೂರಿನಲ್ಲಿ ವಿದ್ಯಾರ್ಥಿನಿಯರು ಕಾಲೇಜಿಗೆ ಹಾಜರಾಗಿದ್ದರು. ಆದರೆ ಇದೀಗ ಹಂಪನಕಟ್ಟೆ ಕಾಲೇಜಿನ ಐವರು ವಿದ್ಯಾರ್ಥಿನಿಯರು ಟಿಸಿ ಪಡೆಯಲು ಮುಂದಾಗಿರುವ ಬಗ್ಗೆ ವರದಿಯಾಗಿದೆ.

By

Published : Jun 20, 2022, 10:56 AM IST

ಮಂಗಳೂರಲ್ಲಿ ಹಿಜಾಬ್ ವಿವಾದ
ಮಂಗಳೂರಲ್ಲಿ ಹಿಜಾಬ್ ವಿವಾದ

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ಅಧೀನದ ಹಂಪನಕಟ್ಟೆ ಕಾಲೇಜಿನಲ್ಲಿ ಹಿಜಾಬ್ ವಿವಾದ ಇನ್ನೂ ತಣ್ಣಗಾಗಿಲ್ಲ. ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿನಿಯರು ಟ್ರಾನ್ಸ್​ಫರ್ ಸರ್ಟಿಫಿಕೇಟ್ (ಟಿಸಿ) ಪಡೆಯಲು ಮುಂದಾಗಿರುವುದು ಬೆಳಕಿಗೆ ಬಂದಿದೆ.

ಮಂಗಳೂರು ವಿ ವಿ ಕಾಲೇಜಿನಲ್ಲಿ ಇತ್ತೀಚೆಗೆ ಹಿಜಾಬ್ ಧರಿಸಲು ಅವಕಾಶ ನಿರಾಕರಿಸಿ ನಿಯಮಾವಳಿಗಳನ್ನು ಮಾಡಲಾಗಿತ್ತು. ಆ ಬಳಿಕ ಮಂಗಳೂರು ವಿ ವಿ ಕಾಲೇಜಿನಲ್ಲಿ ಹಿಜಾಬ್ ವಿಚಾರದಲ್ಲಿ ಸಾಕಷ್ಟು ಪರ ವಿರೋಧ ಚರ್ಚೆಗಳು ನಡೆದಿದ್ದವು. ಮಂಗಳೂರು ವಿ ವಿ ಕಾಲೇಜಿನಲ್ಲಿ 44 ಮುಸ್ಲಿಂ ವಿದ್ಯಾರ್ಥಿನಿಯರಿದ್ದು, ಇವರಲ್ಲಿ 15 ಮಂದಿ ಹಿಜಾಬ್ ತೆಗೆದು ಕಾಲೇಜಿಗೆ ಬರಲು‌ ನಿರಾಕರಿಸಿದ್ದರು.

ವಿದ್ಯಾರ್ಥಿನಿಯರು ಬೇರೆ ಕಾಲೇಜಿಗೆ ತೆರಳುವುದಿದ್ದರೆ ಅವರಿಗೆ ಟಿಸಿ ನೀಡಲು ವ್ಯವಸ್ಥೆ ಮಾಡಲಾಗುವುದೆಂದು ಮಂಗಳೂರು ವಿವಿ ಕುಲಪತಿ ಸುಬ್ರಹ್ಮಣ್ಯ ಯಡಪಡಿತ್ತಾಯ ತಿಳಿಸಿದ್ದರು. ಇದೀಗ ಮಂಗಳೂರು ವಿವಿಯ ಹಂಪನಕಟ್ಟೆ ಕಾಲೇಜಿನ ಐದು ವಿದ್ಯಾರ್ಥಿನಿಯರು ಟಿಸಿ ಪಡೆದು ಬೇರೆ ಕಾಲೇಜಿಗೆ ಹೋಗಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಟಿಸಿ ಪಡೆಯಲು ಅಧಿಕೃತವಾಗಿ ಯಾರೂ ಅರ್ಜಿ ಸಲ್ಲಿಕೆ ಮಾಡಿಲ್ಲ:ಈ ಬಗ್ಗೆ ಈಟಿವಿ ಭಾರತಕ್ಕೆ ಕಾಲೇಜಿನ ಪ್ರಾಂಶುಪಾಲೆ ಅನುಸೂಯ ಅವರು ಪ್ರತಿಕ್ರಿಯೆ ನೀಡಿದ್ದು, ಟಿಸಿ ಪಡೆಯುವ ಬಗ್ಗೆ ವಿದ್ಯಾರ್ಥಿನಿಯರು ಮಾತನಾಡಿದ್ದರು. ಆದರೆ ಯಾರು ಈವರೆಗೆ ಟಿಸಿ ಪಡೆಯಲು ಅರ್ಜಿ ನೀಡಿಲ್ಲ. ಇದೀಗ ಕಾಲೇಜಿನಲ್ಲಿ ಮೌಲ್ಯಮಾಪನ ಪ್ರಕ್ರಿಯೆ ನಡೆಯುತ್ತಿರುವುದರಿಂದ ಪದವಿ ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿ ನಡೆಯುತ್ತಿದ್ದು, ಎಲ್ಲಾ ವಿದ್ಯಾರ್ಥಿಗಳು ಆನ್ ಲೈನ್ ತರಗತಿಯಲ್ಲಿ ಭಾಗಿಯಾಗಿದ್ದಾರೆ ಎಂದು ಅವರು ಇದೇ ವೇಳೆ ಈ ಟಿವಿ ಭಾರತಕ್ಕೆ ಸ್ಪಷ್ಟಪಡಿಸಿದ್ದಾರೆ.

(ಇದನ್ನೂ ಓದಿ: ಉಪ್ಪಿನಂಗಡಿ: ಹಿಜಾಬ್ ಧರಿಸುವುದಾಗಿ ಪಟ್ಟು ಹಿಡಿದಿದ್ದ ವಿದ್ಯಾರ್ಥಿನಿಯರು ತರಗತಿಗೆ ಹಾಜರ್​!)

ABOUT THE AUTHOR

...view details