ಕರ್ನಾಟಕ

karnataka

ETV Bharat / city

ಮಳೆಯೋ ಮಳೆ: ಇಂದು ದ.ಕ, ಉ.ಕ ಜಿಲ್ಲೆಗಳ ಶಾಲಾ, ಕಾಲೇಜುಗಳಿಗೆ ರಜೆ

ದಕ್ಷಿಣಕನ್ನಡ ಮತ್ತು ಉತ್ತರಕನ್ನಡ ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಜಿಲ್ಲೆಯಾದ್ಯಂತ ಇಂದೂ ಕೂಡಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

holiday for schools and colleges in Mangalore, Heavy rain in Mangalore, Dakshina Kannada school and college holiday, Dakshina Kannada heavy rain news, ಮಂಗಳೂರಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ, ಮಂಗಳೂರಿನಲ್ಲಿ ಭಾರೀ ಮಳೆ, ದಕ್ಷಿಣ ಕನ್ನಡ ಶಾಲಾ ಕಾಲೇಜುಗಳಿಗೆ ರಜೆ, ದಕ್ಷಿಣ ಕನ್ನಡ ಭಾರಿ ಮಳೆ ಸುದ್ದಿ,
ಶಾಲಾ ಕಾಲೇಜಿಗೆ ರಜೆ

By

Published : Jul 5, 2022, 7:51 AM IST

Updated : Jul 5, 2022, 9:01 AM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಡಿ ಮಳೆಯಾಗುತ್ತಿದ್ದು ಶಾಲಾ-ಕಾಲೇಜಿಗಳಿಗೆ ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ರಜೆ ಘೋಷಿಸಿದ್ದಾರೆ. ನಿನ್ನೆ ಬೆಳ್ತಂಗಡಿ ತಾಲೂಕಿನ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ, ಪದವಿ, ಡಿಪ್ಲೊಮಾ ಹಾಗು ಐಟಿಐ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.

ಉತ್ತರಕನ್ನಡದಲ್ಲೂ ವ್ಯಾಪಕ ಮಳೆ: ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಮುಂಜಾಗೃತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ಇಂದು ರಜೆ ಘೋಷಿಸಿದೆ. ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜು ಮುಂತಾದ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

ಇದನ್ನೂ ಓದಿ:ಕರಾವಳಿಯಲ್ಲಿ ಭಾರಿ ಮಳೆ: ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಮುಳುಗಡೆ

Last Updated : Jul 5, 2022, 9:01 AM IST

ABOUT THE AUTHOR

...view details