ಸುಬ್ರಹ್ಮಣ್ಯ :ಯಾವುದೇ ವ್ಯಕ್ತಿಯನ್ನು ಕಡೆಗಣಿಸಿ ಸಾಧನೆ ಮಾಡಬೇಕು ಎಂಬ ಮನಸ್ಥಿತಿ ನನಗಿಲ್ಲ. ಭೋಜೇಗೌಡ ಅವರ ಸಣ್ಣತನಕ್ಕೆ ನಾನು ಕಾರಣನಲ್ಲ. ಇದಕ್ಕೆ ನಾನು ಏನೂ ಮಾಡಲು ಸಾಧ್ಯವಿಲ್ಲ ಎಂದು ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಅಂಗಾರ ಹೇಳಿದರು.
ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸಭಾಂಗಣದಲ್ಲಿ ನಡೆದ ಕೋವಿಡ್ ಪರಿಶೀಲನಾ ಸಭೆಯ ಬಳಿಕ ಚಿಕ್ಕಮಗಳೂರಿನಲ್ಲಿ ಇತ್ತೀಚೆಗೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್ ಭೋಜೇಗೌಡ ಅವರು ಜಿಲ್ಲಾಧಿಕಾರಿಗಳ ಕಚೇರಿ ಬಾಗಿಲಲ್ಲಿ ನಡೆಸಿದ ಪ್ರತಿಭಟನೆ ಕುರಿತು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿ ಸಚಿವರು, ನಾನು ಚಿಕ್ಕಮಗಳೂರು ಜಿಲ್ಲೆಗೆ ಸಂಬಂಧಿಸಿದಂತೆ ಜಿಲ್ಲಾ ಅಧಿಕಾರಿಗಳ ವರ್ಗದ ಸಭೆ ಕರೆದಿದ್ದೆ.