ಕರ್ನಾಟಕ

karnataka

ETV Bharat / city

'ಪ್ರವೀಣ್ ಕುಟುಂಬಕ್ಕೆ ಸರ್ಕಾರಿ ನೌಕರಿ ನೀಡುವಂತೆ ಸರ್ಕಾರದ ಗಮನ ಸೆಳೆಯುವೆ'

ಇತ್ತೀಚೆಗೆ ಕೊಲೆಯಾದ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿರುವ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಕುಟುಂಬ ಸದಸ್ಯರಿಗೆ ಸರ್ಕಾರಿ ಕೆಲಸ ಒದಗಿಸಿಕೊಡುವಲ್ಲಿ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ.

By

Published : Jul 29, 2022, 10:46 AM IST

BJP Vice President B Y Vijayendra
ಬಿ.ವೈ.ವಿಜಯೇಂದ್ರ

ಸುಳ್ಯ(ದಕ್ಷಿಣ ಕನ್ನಡ):ಸುಳ್ಯದ ಬೆಳ್ಳಾರೆಯಲ್ಲಿ ಕೊಲೆಯಾದ ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿ, ಪ್ರವೀಣ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿರುವ ಅವರು, ಪ್ರವೀಣ್ ಕುಟುಂಬ ಸದಸ್ಯರಿಗೆ ಸರ್ಕಾರಿ ನೌಕರಿ ನೀಡುವ ಬಗ್ಗೆ ಸರ್ಕಾರದ ಗಮನ ಸೆಳೆಯುತ್ತೇನೆ ಎಂದು ಭರವಸೆ ಕೊಟ್ಟರು.

ಮುಖ್ಯಮಂತ್ರಿ ಹಾಗೂ ಗೃಹಮಂತ್ರಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಎಸ್​ಡಿಪಿಐ, ಪಿಎಫ್​ಐ ಸಂಘಟನೆ, ಯಾರೇ ಇದರಲ್ಲಿ ಇದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಮುಂದೆ ಇಂತಹ ಕೃತ್ಯಗಳು ರಾಜ್ಯದಲ್ಲಿ ಬೇರೆಲ್ಲೂ ಆಗಬಾರದು. ಈ ಕುಟುಂಬಕ್ಕೆ ಬಂದ ಸ್ಥಿತಿ ಯಾವುದೇ ಶತ್ರುಗಳಿಗೂ ಬರಬಾರದು ಎಂದರು.

ಬೆಳ್ಳಾರೆಯಲ್ಲಿ ಲಾಠಿಚಾರ್ಜ್ ನಡೆದ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿ, ಕಾರ್ಯಕರ್ತರ ಮೇಲೆ‌ ಲಾಠಿ ಚಾರ್ಜ್ ಮಾಡಬಾರದಿತ್ತು. ಲಾಠಿ ಚಾರ್ಜ್ ಮಾಡದೆಯೇ ಪರಿಸ್ಥಿತಿ ನಿಯಂತ್ರಿಸಬಹುದಿತ್ತು. ಇದು ಖಂಡನೀಯ ಎಂದು ಹೇಳಿದರು.

ಇದನ್ನೂ ಓದಿ:'ಪ್ರತೀ ಹತ್ಯೆಯಲ್ಲಿ ಪಿಎಫ್‌ಐ ಸಂಘಟನೆಯನ್ನು ಸಿಲುಕಿಸುವ ಷಡ್ಯಂತ್ರ ನಡೆಯುತ್ತಿದೆ'

ABOUT THE AUTHOR

...view details