ಮಂಗಳೂರು: ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸುಳ್ಳು ಭರವಸೆ ನೀಡಿದ್ದಾರೆ. ಸುಳ್ಳಿಗೆ ಆಸ್ಕರ್ ಅವಾರ್ಡ್ ಕೊಡುವುದಿದ್ದರೆ ಅವರಿಗೆ ಕೊಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ವ್ಯಂಗ್ಯವಾಡಿದರು.
ಮಂಗಳೂರಿನ ಪುರಭವನದಲ್ಲಿ ನಡೆದ ಬಿ.ಕೆ.ಹರಿಪ್ರಸಾದ್ ಮತ್ತು ಯು.ಟಿ.ಖಾದರ್ ಅವರ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ ಅವರು ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ತೋರಿಸಿ, ಬಿಜೆಪಿ ಅಧಿಕಾರಕ್ಕೆ ಬಂದರೆ ದರ ಇಳಿಸುವ ಭರವಸೆ ನೀಡಿದ್ದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಆದರೆ, ಈಗ ದರ ಹೆಚ್ಚಳ ಮಾಡಿದರು. ಕಪ್ಪು ಹಣ ಭಾರತಕ್ಕೆ ತಂದು ಪ್ರತಿಯೊಬ್ಬರಿಗೆ 15 ಲಕ್ಷ ಹಣ ಖಾತೆಗೆ ಹಾಕಲಾಗುವುದು ಎಂದು ಹೇಳಿದ್ದರು. ಆದರೆ, ಅದೂ ಕೂಡ ಸುಳ್ಳು ಭರವಸೆ ಆಯಿತು. ಲಕ್ಷಾಂತರ ಉದ್ಯೋಗ ಸೃಷ್ಟಿಸುವ ಬಗ್ಗೆ ಕೂಡ ಸುಳ್ಳು ಭರವಸೆ ನೀಡಿದ್ದರು ಎಂದು ದೂರಿದರು.
ಇನ್ನೂ ರಾಜ್ಯದಲ್ಲಿಯೂ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಇವರು ಜನಾಶೀರ್ವಾದ ಸಭೆ ನಡೆಸುತ್ತಾರೆ. ಆದರೆ, ಇವರು ಜನರ ಕ್ಷಮೆಯಾಚಿಸುವ ಸಭೆ ನಡೆಸಬೇಕು. ಯಾವುದೇ ಸಂದರ್ಭದಲ್ಲಿ ಚುನಾವಣೆ ನಡೆದರೂ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ಎಂದು ಇದೇ ವೇಳೆ ಅವರು ವಿಶ್ವಾಸ ವ್ಯಕ್ತಪಡಿಸಿದರು.
(ಇದನ್ನೂ ಓದಿ: ಪ್ರಿಯತಮೆಗೆ ವಿಭಿನ್ನ ರೀತಿಯಲ್ಲಿ ಪ್ರಪೋಸ್.. ಹೋರ್ಡಿಂಗ್ ಮೂಲಕ ಮದುವೆ ಪ್ರಸ್ತಾಪ ಮಾಡಿದ ಯುವಕ!)