ಕರ್ನಾಟಕ

karnataka

ETV Bharat / city

ಅಕ್ರಮ ಮರಳು ಸಾಗಾಟ: 10.50 ಲಕ್ಷ ರೂ. ಮೌಲ್ಯದ ಸೊತ್ತು ವಶ - ಪರವಾನಿಗೆ

ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಮರಳನ್ನ ಉಡುಪಿಗೆ ಸಾಗಾಟ ಮಾಡುತ್ತಿದ್ದ ವಿಷಯ ತಿಳಿದ ಕಂಕನಾಡಿ ನಗರ ಪೊಲೀಸರು ಆರೋಪಿಗಳನ್ನ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಲಾರಿ ವಶ

By

Published : Mar 21, 2019, 1:14 PM IST

ಮಂಗಳೂರು: ಪರವಾನಗಿ ಇಲ್ಲದೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಇಂದು ಮುಂಜಾನೆ ಕಂಕನಾಡಿ ನಗರ ಪೊಲೀಸರು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಪಿಎಸ್ಐ​ ರಾತ್ರಿ ರೌಂಡ್ಸ್ ಕರ್ತವ್ಯದಲ್ಲಿರುವ ಸಂದರ್ಭದಲ್ಲಿ ಬಿ.ಸಿ ರೋಡ್ ಕಡೆಯಿಂದ ಪಡೀಲ್ ಮಾರ್ಗವಾಗಿ ಉಡುಪಿ ಕಡೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಕಾರ್ಯಚರಣೆ ನಡೆಸಿ 10.50 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನ ವಶಪಡಿಸಿಕೊಂಡಿದ್ದಾರೆ.

ಶೇಖರ್ ಎಂಬುವವರ ಮಾಲೀಕತ್ವದಲ್ಲಿ ಮಧು ಎಂಬ ಚಾಲಕ ಲಾರಿಯಲ್ಲಿ ಮರಳನ್ನು ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಉಡುಪಿಗೆ ಸಾಗಾಟ ಮಾಡುತ್ತಿದ್ದ. ವಿಷಯ ತಿಳಿದ ಪೊಲೀಸರು ಆರೋಪಿಗಳನ್ನ ಪತ್ತೆ ಹಚ್ಚಿ ಮುಂದಿನ ಸೂಕ್ತ ಕಾನೂನು ಕ್ರಮಕ್ಕಾಗಿ ಉಪ ನಿರ್ದೇಶಕರು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮಂಗಳೂರು ಇವರಿಗೆ ಹಸ್ತಾಂತರಿದ್ದಾರೆ.

ಈ ಕಾರ್ಯಾಚರಣೆಯನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಉಪ ಪೊಲೀಸ್ ಆಯುಕ್ತ ಹನುಮಂತರಾಯ ಮತ್ತು ಉಮಾ ಪ್ರಶಾಂತ್ ಹಾಗೂ ಮಂಗಳೂರು ದಕ್ಷಿಣ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ರಾಮರಾವ್ ಅವರ ಮಾರ್ಗದರ್ಶನದಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣಾ ನಿರೀಕ್ಷಕ ಜಗದೀಶ್ ನೇತೃತ್ವದದಲ್ಲಿ ಉಪ ನಿರೀಕ್ಷಕ ಪ್ರದೀಪ್ ಟಿ.ಆರ್ ಮತ್ತು ಠಾಣಾ ಸಿಬ್ಬಂದಿ ಮಾಡಿದ್ದಾರೆ.

ABOUT THE AUTHOR

...view details