ಕರ್ನಾಟಕ

karnataka

ETV Bharat / city

ಮಂಗಳೂರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರ: ಅಪರಾಧಿಗೆ 7 ವರ್ಷಗಳ ಕಠಿಣ ಶಿಕ್ಷೆ - ಮಂಗಳೂರು ಅತ್ಯಾಚಾರ ಪ್ರಕರಣ

ವಿದ್ಯಾರ್ಥಿನಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಅಪರಾಧಿ ಇರ್ಫಾನ್​ಗೆ ನ್ಯಾಯಾಲಯ ಏಳು ವರ್ಷಗಳ ಕಠಿಣ ಸಜೆ ವಿಧಿಸಿ ತೀರ್ಪು ನೀಡಿದೆ.

Imprisonment for offender of mangalore rape case
ಮಂಗಳೂರು ಅತ್ಯಾಚಾರ ಆಪರಾಧಿಗೆ ಜೈಲುಶಿಕ್ಷೆ

By

Published : Nov 30, 2021, 12:42 PM IST

ಮಂಗಳೂರು: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು ಎಫ್​ಟಿಎಸ್‌ಸಿ-1 ನ್ಯಾಯಾಲಯ ಏಳು ವರ್ಷಗಳ ಕಠಿಣ ಸಜೆ ವಿಧಿಸಿದೆ.

ಮಂಗಳೂರು ತಾಲೂಕಿನ ಕೋಟೆಕಾರು ಗ್ರಾಮದ ದೇರಳಕಟ್ಟೆಯ ನಿವಾಸಿ ಇರ್ಫಾನ್ (28) ಎಂಬಾತ ಶಿಕ್ಷೆಗೊಳಗಾದ ಅಪರಾಧಿ. ಈತನಿಗೆ ಅಪಹರಣ ಕೃತ್ಯಕ್ಕೆ 3 ವರ್ಷ ಸಜೆ ಮತ್ತು 5 ಸಾವಿರ ರೂ. ದಂಡ, ಒಂದು ವೇಳೆ ದಂಡ ಪಾವತಿಸಲು ತಪ್ಪಿದರೆ 15 ದಿನ ಹೆಚ್ಚುವರಿ ಸಜೆ. ತಡೆದು ನಿಲ್ಲಿಸಿದ ಕೃತ್ಯಕ್ಕೆ 5 ತಿಂಗಳು ಸಜೆ ಮತ್ತು 1 ಸಾವಿರ ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಮತ್ತೆ 15 ದಿನ ಸಜೆ. ಹತ್ಯೆ ಬೆದರಿಕೆಯೊಡ್ಡಿರುವುದಕ್ಕೆ ಒಂದು ವರ್ಷ ಸಜೆ ಮತ್ತು 2 ಸಾವಿರ ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ ಎರಡು ತಿಂಗಳು ಸಜೆ ವಿಧಿಸಿದೆ.

7 ವರ್ಷ ಶಿಕ್ಷೆ:ಒಟ್ಟಾರೆ ಅಪ್ರಾಪ್ತೆ ಮೇಲಿನ ಅತ್ಯಾಚಾರಕ್ಕೆ ಪೋಕ್ಸೋ ಕಾಯ್ದೆಯಡಿ ಏಳು ವರ್ಷ ಸಜೆ ಮತ್ತು 15 ಸಾವಿರ ರೂ. ದಂಡ, ಇದನ್ನು ಪಾವತಿಸಲು ತಪ್ಪಿದರೆ ಹೆಚ್ಚುವರಿಯಾಗಿ ಎರಡು ತಿಂಗಳ ಸಜೆ ವಿಧಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

Mangalore rape case: 2014ರಲ್ಲಿ ಅಪರಾಧಿ ಇರ್ಫಾನ್ ವಿದ್ಯಾರ್ಥಿನಿಯನ್ನು ಅಪಹರಿಸಿ ಲಾಡ್ಜ್​​ನಲ್ಲಿ ಕೂಡಿ ಹಾಕಿ ಅತ್ಯಾಚಾರವೆಸಗಿದ್ದ. ಈತ ಸಂತ್ರಸ್ತೆಯ ಪರಿಚಯ ಮಾಡಿಕೊಂಡು ಫೋನ್‌ನಲ್ಲಿ ಮಾತನಾಡಿ ಪ್ರೀತಿ ಮಾಡುತ್ತಿರುವುದಾಗಿಯೂ, ಮದುವೆಯಾಗಬೇಕು ಎಂದು ಒತ್ತಾಯಿಸುತ್ತಿದ್ದ. ವಿದ್ಯಾರ್ಥಿನಿ ಪರೀಕ್ಷೆ ಬರೆಯಲೆಂದು ಕಾಲೇಜಿಗೆ ಹೋಗುತ್ತಿದ್ದ ವೇಳೆ ಆಕೆಯನ್ನು ನಾಟೆಕಲ್‌ ಎಂಬಲ್ಲಿ ತಡೆದು ನಿಲ್ಲಿಸಿ ಕಾರಿನಲ್ಲಿ ಅಪಹರಣ ಮಾಡಿ ಚಿಕ್ಕಮಗಳೂರಿನ ಲಾಡ್ಜ್‌ಗೆ ಕರೆದೊಯ್ದಿದ್ದ. ಅಲ್ಲಿ ಆಕೆಯನ್ನು ಕೂಡಿ ಹಾಕಿ ಅತ್ಯಾಚಾರವೆಸಗಿದ್ದ. ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಹತ್ಯೆ ಮಾಡುವುದಾಗಿಯೂ ಬೆದರಿಕೆಯೊಡ್ಡಿದ್ದ.

ಇತ್ತ ವಿದ್ಯಾರ್ಥಿನಿ ನಾಪತ್ತೆಯಾದ ಬಗ್ಗೆ ಆಕೆಯ ಹೆತ್ತವರು ಉಳ್ಳಾಲ ಠಾಣಾ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಪತ್ತೆ ಹಚ್ಚಿ ಇರ್ಫಾನ್​ಅನ್ನು ಬಂಧಿಸಿದ್ದರು. ಆಗಿನ ಉಳ್ಳಾಲ ಇನ್‌ಸ್ಪೆಕ್ಟರ್ ಸವಿತ್ರ ತೇಜ ಅವರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.

ಇದನ್ನೂ ಓದಿ:ನಾಗರಹೊಳೆ ರಾಷ್ಟ್ರೀಯ ಉದ್ಯಾನಕ್ಕೆ 'ಚಾರ್ಲಿ' ಎಂಟ್ರಿ

ಇದೀಗ ನ್ಯಾಯಾಧೀಶೆ ಸಾವಿತ್ರಿ ವಿ. ಭಟ್ ಅವರು ವಿಚಾರಣೆ ನಡೆಸಿ ಆರೋಪಿಯ ಅಪರಾಧ ದೃಢಪಟ್ಟ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ವಿದ್ಯಾರ್ಥಿನಿ ಪರ ವಿಶೇಷ ಸರ್ಕಾರಿ ಅಭಿಯೋಜಕ ವೆಂಕಟರಮಣಸ್ವಾಮಿ ಸಿ ವಾದಿಸಿದ್ದರು.

ABOUT THE AUTHOR

...view details