ಪುತ್ತೂರು: ಶ್ರೀ ರಾಮಮಂದಿರ ನಿರ್ಮಾಣಕ್ಕೆ ಎಲ್ಲಾ ಹಿಂದುಗಳ ಸಹಭಾಗಿತ್ವ ಇರಬೇಕೆನ್ನುವ ಉದ್ದೇಶದಿಂದ ಆಯೋಧ್ಯೆ ಶ್ರೀ ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನ ಆರಂಭಿಸುತ್ತಿದ್ದು, ಈ ಹಿನ್ನೆಲೆ ಇಂದು ಪುತ್ತೂರು ಜಿಲ್ಲಾ ಕಾರ್ಯಾಲಯ ಉದ್ಘಾಟನಾ ಕಾರ್ಯಕ್ರಮವನ್ನು ಶ್ರೀ ಮಹಾಲಿಂಗೇಶ್ವರ ದೇವಳದ ಸಭಾಭವನದಲ್ಲಿ ನಡೆಸಲಾಯಿತು.
ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನ: ಪುತ್ತೂರು ಜಿಲ್ಲಾ ಕಾರ್ಯಾಲಯ ಉದ್ಘಾಟನೆ - Shri Ram Mandir Fund Dedication Campaign Office
ಆಯೋಧ್ಯೆ ಶ್ರೀ ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನದ ಪುತ್ತೂರು ಜಿಲ್ಲಾ ಕಾರ್ಯಾಲಯ ಉದ್ಘಾಟನಾ ಕಾರ್ಯಕ್ರಮವನ್ನು ಇಂದು ಶ್ರೀ ಮಹಾಲಿಂಗೇಶ್ವರ ದೇವಳದ ಸಭಾಭವನದಲ್ಲಿ ನಡೆಸಲಾಯಿತು.
![ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನ: ಪುತ್ತೂರು ಜಿಲ್ಲಾ ಕಾರ್ಯಾಲಯ ಉದ್ಘಾಟನೆ ಪುತ್ತೂರು ಜಿಲ್ಲಾ ಕಾರ್ಯಾಲಯ](https://etvbharatimages.akamaized.net/etvbharat/prod-images/768-512-9792269-thumbnail-3x2-lek.jpg)
ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನೇತೃತ್ವದಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ಶ್ರೀ ರಾಮಮಂದಿರಕ್ಕೆ ಎಲ್ಲಾ ಹಿಂದುಗಳ ಸಹಭಾಗಿತ್ವ ಇರಬೇಕೆನ್ನುವ ನಿಟ್ಟಿನಲ್ಲಿ ನಿಧಿ ಸಂಗ್ರಹಕ್ಕೆ ಮುಂದಿನ ಜನವರಿ 15ರಿಂದ ಫೆಬ್ರವರಿ 27ರ ಮಾಘ ಹುಣ್ಣಿಮೆ ತನಕ ಅಂದರೆ 45 ದಿನಗಳ ಕಾಲ ಈ ವಿಶೇಷ ಅಭಿಯಾನ ಇಡೀ ದೇಶಾದ್ಯಂತ ನಡೆಯಲಿರುವ ಹಿನ್ನೆಲೆ ಪುತ್ತೂರು ಜಿಲ್ಲಾ ಕಾರ್ಯಾಲಯ ಉದ್ಘಾಟನೆ ಕಾರ್ಯಕ್ರಮವನ್ನು ಇಂದು ನಡೆಸಲಾಯಿತು.
ಈ ವೇಳೆ ಓಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನ ಕ್ಷೇತ್ರದ ಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ, ಕಲ್ಲಡ್ಕ ಡಾ. ಪ್ರಭಾಕರ ಭಟ್, ಸುಭಾಶ್ ಕಲೆಂಜ, ಸುಧಾಕರ ರೈ, ಮುರಳಿಕೃಷ್ಣ ಹಸಂತಡ್ಕ ಸೇರಿದಂತೆ ವಿವಿಧ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ರಾಧಾಕೃಷ್ಣ ಆಳ್ವ, ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಅಧ್ಯಕ್ಷ ಡಾ. ಕೃಷ್ಣಪ್ರಸನ್ನ, ಪ್ರಧಾನ ಕಾರ್ಯದರ್ಶಿ ಸತೀಶ್ ಬಿ.ಎಸ್., ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಉಪಾಧ್ಯಕ್ಷೆ ವಿದ್ಯಾ ಆರ್. ಗೌರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.