ಮಂಗಳೂರು :ಸರ್ಫಿಂಗ್ ಫೆಡರೇಶನ್ ಆಫ್ ಇಂಡಿಯಾ, ಮಂತ್ರ ಸರ್ಫ್ ಕ್ಲಬ್ ಮೂಲ್ಕಿ, ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ಪಣಂಬೂರು ಬೀಚ್ನಲ್ಲಿ ನಡೆಯುತ್ತಿರುವ 'ಇಂಡಿಯನ್ ಓಪನ್ ಆಫ್ ಸರ್ಫಿಂಗ್' ವೀಕ್ಷಕರನ್ನು ರೋಮಾಂಚನಗೊಳಿಸುತ್ತಿದೆ.
ಈ ಕ್ರೀಡಾಕೂಟದಲ್ಲಿ ರಾಷ್ಟ್ರೀಯ ಮಟ್ಟದ ರ‍್ಯಾಂಕಿಂಗ್ ಪಡೆದಿರುವ ಸುಮಾರು 90ಕ್ಕೂ ಅಧಿಕ ಪ್ರಮುಖ ಸರ್ಫಿಂಗ್ ಪಟುಗಳು ಭಾಗವಹಿಸಿದ್ದಾರೆ. ಪುರುಷರ ಹಾಗೂ ಮಹಿಳೆಯರ ಮುಕ್ತ ವಿಭಾಗದಲ್ಲಿ ಸ್ಪರ್ಧೆಗಳು ಮೇ 27 ರಿಂದ 29ರವರೆಗೆ ಮೂರು ದಿನಗಳ ಕಾಲ ಬೆಳಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆವರೆಗೆ ಸ್ಪರ್ಧೆ ನಡೆಯುತ್ತಿದೆ. ರಾಜ್ಯ ಪ್ರವಾಸೋದ್ಯಮ ಇಲಾಖೆಯಿಂದ 15 ಲಕ್ಷ ರೂ. ಅನುದಾನದೊಂದಿಗೆ ಈ ಸರ್ಫಿಂಗ್ ಚಾಂಪಿಯನ್‌ಶಿಪ್ ನಡೆಯುತ್ತಿದೆ.