ಮಂಗಳೂರು/ಉಡುಪಿ:ನಗರದ ಲಾಲ್ಬಾಗ್ನಲ್ಲಿ ನೂತನವಾಗಿ ನಿರ್ಮಾಣ ಮಾಡಲಾದ ನ್ಯಾಯಾಂಗ ಅಧಿಕಾರಿಗಳ ವಸತಿ ಸಮುಚ್ಚಯ ಉದ್ಘಾಟನೆಗೊಂಡಿತು.
ಜಿಲ್ಲಾ ನ್ಯಾಯಾಂಗ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆಯ ಜಂಟಿ ಸಹಭಾಗಿತ್ವದಲ್ಲಿ ಮಂಗಳೂರು ನಗರದ ಲಾಲ್ಬಾಗ್ನಲ್ಲಿ ನ್ಯಾಯಾಂಗ ಅಧಿಕಾರಿಗಳ ವಸತಿ ಸಮುಚ್ಚಯವನ್ನು ಸುಪ್ರೀಂಕೋರ್ಟ್ನ ನ್ಯಾಯಮೂರ್ತಿ ಅಬ್ದುಲ್ ನಜೀರ್ ಉದ್ಘಾಟಿಸಿದರು.
ಈ ಸಂದರ್ಭ ರಾಜ್ಯ ಹೈಕೋರ್ಟ್ನ ಮುಖ್ಯ ನ್ಯಾಯಾಧೀಶ ಜಸ್ಟೀಸ್ ಎ ಎಸ್ ಓಕ್, ದಕ್ಷಿಣಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ಕಡ್ಲೂರು ಸತ್ಯನಾರಾಯಣ ಆಚಾರ್ಯ, ಹೈಕೋರ್ಟ್ನ ಜಡ್ಜ್ ಹಾಗೂ ದ.ಕ ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶ ಜಸ್ಟೀಸ್ ವೀರಪ್ಪ ಮತ್ತಿತರರು ಉಪಸ್ಥಿತರಿದ್ದರು.
ನ್ಯಾಯಾಂಗ ಅಧಿಕಾರಿಗಳ ವಸತಿ ಸಮುಚ್ಚಯ ಉದ್ಘಾಟನೆ ಕುಂದಾಪುರ ನ್ಯಾಯಾಲಯದ ನೂತನ ಕಟ್ಟಡಕ್ಕೆ ಶಿಲಾನ್ಯಾಸ :
ಉಡುಪಿ ಜಿಲ್ಲೆಯ ಕುಂದಾಪುರ ನ್ಯಾಯಾಲಯದ ಆವರಣದಲ್ಲಿ ನ್ಯಾಯಾಲಯದ ನೂತನ ಕಟ್ಟಡಕ್ಕೆ ಸುಪ್ರೀಂಕೋರ್ಟ್ ನ್ಯಾಯಾಧೀಶ ಅಬ್ದುಲ್ ನಝೀರ್ ಶಿಲಾನ್ಯಾಸ ನೆರವೇರಿಸಿದರು.ಈ ವೇಳೆ ಮಾತನಾಡಿದ ಅವರು, ಸಮಾಜದ ಉತ್ತಮ ಸ್ವಾಸ್ಥ್ಯಕ್ಕಾಗಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ತುರ್ತು ಇತ್ಯರ್ಥಪಡಿಸುವ ಅಗತ್ಯತೆ ಮತ್ತು ಅನಿವಾರ್ಯತೆ ಇದೆ ಎಂದರು. ಈ ಸಂದರ್ಭ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಅಭಯ್ ಶ್ರೀನಿವಾಸ ಓಕಾ, ಬಿ ಎ ಪಟೇಲ್, ಬಿ. ವೀರಪ್ಪ, ಸಾಲಿಸಿಟರ್ ಜನರಲ್ ಕೆ ಎಂ ನಟರಾಜ್, ರಿಜಿಸ್ಟ್ರಾರ್ ಜನರಲ್ ಕೆ ಎಂ ನಟರಾಜ್, ಉಡುಪಿ ಜಿಲ್ಲಾ ನ್ಯಾಯಾಧೀಶ ಸಿ ಎಂ ಜೋಶಿ, ಕುಂದಾಪುರ ಬಾರ್ ಅಸೋಸಿಯೇಷನ್ ಅಧ್ಯಕ್ಷರಾದ ನಿರಂಜನ್ ಹೆಗ್ಡೆ ಉಪಸ್ಥಿತರಿದ್ದರು.