ಮಂಗಳೂರು: ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಅವರು ಸತತವಾಗಿ ನನಗೆ ಮಾನಸಿಕ ಹಿಂಸೆ ನೀಡಿದ್ದಾರೆ. ಅವರ ಹೇಳಿಕೆಗೆ ಪ್ರಾಮುಖ್ಯತೆ ಕೊಡಬೇಕಾಗಿಲ್ಲ ಎಂದು ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಹೇಳಿದ್ದಾರೆ.
ಜನಾರ್ದನ ಪೂಜಾರಿ ಸತತವಾಗಿ ನನಗೆ ಮಾನಸಿಕ ಹಿಂಸೆ ನೀಡಿದ್ದಾರೆ: ಐವನ್ ಡಿಸೋಜ - Janardhan Poojary
ಜನಾರ್ದನ ಪೂಜಾರಿ ಅವರ ಹೇಳಿಕೆಗೆ ಪ್ರಾಮುಖ್ಯತೆ ಕೊಡಬೇಕಾಗಿಲ್ಲ ಎಂದು ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಹೇಳಿದ್ದಾರೆ.
ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕುದ್ರೋಳಿ ದೇವಸ್ಥಾನಕ್ಕೆ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾರದಂತೆ ತಡೆದದ್ದು ನಾನು ಎಂದು ಆಪಾದಿಸುತ್ತಿದ್ದಾರೆ. ನಾನು ಸಿದ್ದರಾಮಯ್ಯ ಅವರನ್ನು ಕುದ್ರೋಳಿ ದೇವಸ್ಥಾನಕ್ಕೆ ಹೋಗದಂತೆ ತಡೆದಿಲ್ಲ. ನಾನು ಅಷ್ಟು ದೊಡ್ಡ ಜನ ಕೂಡಾ ಅಲ್ಲ. ನನಗೆ ಅದು ಬೇಕಿಲ್ಲ ಮತ್ತು ಅದು ನನ್ನ ಕೆಲಸವೂ ಅಲ್ಲ. ಈ ವಿಚಾರವನ್ನು ನಾನು ದೇವರಿಗೆ ಬಿಟ್ಟಿದ್ದೇನೆ ಎಂದರು.
ನಾನು ಕಾಂಗ್ರೆಸ್ ಪಕ್ಷಕ್ಕಾಗಿ ದುಡಿಯುತ್ತಿದ್ದು, ಮೋದಿ ಅವರನ್ನು ಸೋಲಿಸಬೇಕೆಂಬ ಪ್ರಯತ್ನ ಮಾಡುತ್ತಿದ್ದೇನೆ. ಆದರೆ ಮೋದಿ ಅವರು ಭ್ರಷ್ಟಾಚಾರಿ ಅಲ್ಲ ಎಂದವರ ಮಾತಿಗೆ ನಾನು ಪ್ರಾಮುಖ್ಯತೆ ಕೊಡಬೇಕಾಗಿಲ್ಲ ಎಂದರು.