ಮಂಗಳೂರು:ತಾಲೂಕಿನ ಕುಪ್ಪೆಪದವು ಕಲ್ಲಿನಕೋರೆಯಲ್ಲಿ ನಿಲ್ಲಿಸಿದ್ದ ಜೆಸಿಬಿ, ಹಿಟಾಚಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ.
ಜೆಸಿಬಿ, ಹಿಟಾಚಿ ಕಳವು ಪ್ರಕರಣ: ಆರೋಪಿ ಬಂಧನ -
ಜುಲೈ 8 ರಂದು ಮಂಗಳೂರು ತಾಲೂಕಿನ ಕುಪ್ಪೆಪದವು ಕಲ್ಲಿನಕೋರೆಯಲ್ಲಿ ನಿಲ್ಲಿಸಿದ್ದ ಜೆಸಿಬಿ, ಹಿಟಾಚಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ.
ಮುತ್ತೂರು ನಿವಾಸಿ ಅಬ್ದುಲ್ ರೆಹಮಾನ್ (35) ಬಂಧಿತ ಆರೋಪಿ. ಮಂಗಳೂರಿನ ದಂಬೇಲ್ ನಿವಾಸಿ ಶರತ್ ಕೆ. ಚಂದ್ರ ಎಂಬುವರು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಲೆಂಜಾರು ಗ್ರಾಮದ ಕುಪ್ಪೆಪದವು ಕಲ್ಲಿನಕೋರೆಯಲ್ಲಿ ಇಟ್ಟಿದ್ದ ಜೆಸಿಬಿ ಮತ್ತು ಟಾಟಾ ಹಿಟಾಚಿ ಜುಲೈ 8 ರಂದು ಕಳ್ಳತನ ವಾಗಿದ್ದವು. ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇಂದು ಆರೋಪಿಯನ್ನ ಬಂಧಿಸಲಾಗಿದ್ದು, ಆತ ಕಳವು ಮಾಡಿದ ಜೆಸಿಬಿ ಮತ್ತು ಹಿಟಾಚಿ ಯಂತ್ರದ ತುಂಡರಿಸಿದ ಭಾಗಗಳು, ಮಷಿನ್‌ಗಳ ಭಾಗಗಳು ಹಾಗೂ ಇವುಗಳನ್ನ ಸಾಗಿಸಲು ಉಪಯೋಗಿಸಿದ ಲಾರಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಕಳ್ಳತನವಾದ ಜೆಸಿಬಿ, ಹಿಟಾಚಿಯ ಒಟ್ಟು ಮೌಲ್ಯ 9 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.