ಮಂಗಳೂರು :ಮಾಜಿ ಸಿಎಂ ಹೆಚ್ಡಿಕೆ ಜೋಕರ್ ಎಂದು ಹೇಳಿಕೆ ನೀಡಿರುವುದನ್ನು ಖಂಡಿಸಿ ದ.ಕ. ಜಿಲ್ಲಾ ಯುವ ಜೆಡಿಎಸ್ ಕಾರ್ಯಕರ್ತರು ಪ್ರವಾಸೋದ್ಯಮ ಸಚಿವ ಸಿ ಪಿ ಯೋಗೇಶ್ವರ್ ವಿರುದ್ಧ ಘೋಷಣೆ ಕೂಗಿದರು.
ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣರ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಸಚಿವ ಯೋಗೀಶ್ವರ್ ವಾಸ್ತವ್ಯ ಹೂಡಿದ್ದ ಖಾಸಗಿ ಹೋಟೆಲ್ ಮುಂದೆ ಜಮಾಯಿಸಿದರು. ಬಳಿಕ ರಸ್ತೆ ಪಕ್ಕದಲ್ಲಿ ನಿಂತು ಘೋಷಣೆ ಕೂಗಿದ್ದಾರೆ.