ಕರ್ನಾಟಕ

karnataka

ETV Bharat / city

ಆದ್ಯತೆ ಮೇರೆಗೆ MRPL ನಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ನೀಡುವಂತೆ ಸೂಚನೆ: ಟಿ.ಎಸ್ ನಾಗಾಭರಣ - Chairman of Kannada Development Authority T.S. Nagabharana

ಆದ್ಯತೆ ಮೇರೆಗೆ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್​​ಪಿಎಲ್)​​ನಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ದೊರಕಿಸಿಕೊಡುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಹೇಳಿದರು.

T.S. Nagabharana
ಟಿ.ಎಸ್ ನಾಗಾಭರಣ

By

Published : Apr 9, 2022, 9:39 AM IST

ಮಂಗಳೂರು:ನಗರದ ಎಂಆರ್‌ಪಿಎಲ್ ಸಂಸ್ಥೆಯಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ಲಭ್ಯವಾಗದಿರಲು ನೇಮಕಾತಿ ಪರೀಕ್ಷೆ ಬರೆಯಲು ಕಡಿಮೆ ಸಂಖ್ಯೆಯಲ್ಲಿ ಕನ್ನಡಿಗರು ಹಾಜರಾಗಿರುವುದು ಕಾರಣ. ಹಾಗಾಗಿ ನಾನು ನಿನ್ನೆ ಎಂಆರ್​​ಪಿಎಲ್ ನ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಮಾತನಾಡಿದ್ದು, ಆದ್ಯತೆ ಮೇರೆಗೆ ಕನ್ನಡಿಗರನ್ನು ಸಂಸ್ಥೆಗೆ ನೇಮಕ‌ ಮಾಡಿಕೊಳ್ಳಲು ಒತ್ತಾಯಿಸಿದ್ದೇನೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಹೇಳಿದರು.

ಮಂಗಳೂರಿನಲ್ಲಿ ಟಿ.ಎಸ್. ನಾಗಾಭರಣ ಮಾಧ್ಯಮಗೋಷ್ಟಿ

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾಧ್ಯಮಗೋಷ್ಟಿಯಲ್ಲಿ ಅವರು ಮಾತನಾಡಿದರು. 2020ರ ಮೇ ಯಲ್ಲಿ ನಡೆದ ಎಂಆರ್​​ಪಿಎಲ್ ನ ನೇಮಕಾತಿಯ ಸಂದರ್ಭ 170 ಮಂದಿಯ ಪೈಕಿ 14 ಮಂದಿ ಕನ್ನಡಿಗರಿದ್ದರು. ಇದಕ್ಕೆ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಿಗರಿಂದ ಕಡಿಮೆ ಸಂಖ್ಯೆಯಲ್ಲಿ ಅರ್ಜಿ ಬಂದಿರುವುದೇ ಕಾರಣ. ಆದರೆ ನೇಮಕಾತಿಯಲ್ಲಿ ಕನ್ನಡಿಗರಿಗೆ ಆದ್ಯತೆ ನೀಡುವಂತೆ ಸೂಚಿಸಲಾಗಿದೆ. ಈ ಬಗ್ಗೆ ಸಂಬಂಧಿತ ಸಚಿವಾಲಯಕ್ಕೆ ಪತ್ರ ಬರೆಯುವಂತೆ ತಿಳಿಸಲಾಗಿದೆ. ಕನ್ನಡಿಗರಿಗೆ ಉದ್ಯೋಗ ನೀಡುವಂತಾಗಲು ಕೇಂದ್ರದ ಸಚಿವರೊಂದಿಗೂ ನಾನು ಮಾತನಾಡುತ್ತೇನೆ ಎಂದು ಹೇಳಿದರು.

ಎಂಆರ್​​ಪಿಎಲ್ ನಲ್ಲಿ ಕನ್ನಡ ಅನುಷ್ಠಾನಕ್ಕೆ ಸೂಚಿಸಲಾಗಿದೆ. ಜತೆಗೆ ತ್ರಿಭಾಷಾ ಸೂತ್ರದಂತೆ ಕನ್ನಡ ನಾಮಫಲಕ ಅಳವಡಿಕೆಗೆ ಸಂಸ್ಥೆಯ ಎಂಡಿ ಒಪ್ಪಿಕೊಂಡಿದ್ದಾರೆ. ಅಲ್ಲದೇ ಬ್ಯಾಂಕ್‌ಗಳಲ್ಲಿ ಸಿಬ್ಬಂದಿ ಕನ್ನಡ ಕಲಿಯಬೇಕು, ವ್ಯವಹಾರವನ್ನು ಕನ್ನಡದಲ್ಲಿಯೇ ನಡೆಸಬೇಕು. ಚೆಕ್ ಪುಸ್ತಕ, ಚಲನ್ ಕನ್ನಡದಲ್ಲಿ ಮುದ್ರಿಸಬೇಕು ಎಂದು ಸೂಚಿಸಲಾಗಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಹಮ್ಮಿಕೊಂಡಿರುವ 'ಕನ್ನಡವನ್ನು ಕಾಣಿಸಿ, ಕನ್ನಡವನ್ನು ಕೇಳಿಸಿ' ಅಭಿಯಾನವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿದೆ. ಸಣ್ಣಪುಟ್ಟ ಲೋಪದೋಷಗಳನ್ನು ಹೊರತುಪಡಿಸಿದರೆ ಜಿಲ್ಲೆಯಲ್ಲಿ ಕನ್ನಡ ಭಾಷೆಯ ಅನುಷ್ಠಾನ ಯಶಸ್ಸು ಪಡೆದಿದೆ ಎಂದರು.

ಕಳೆದ ಎರಡು ದಿನಗಳಿಂದ ಜಿಲ್ಲೆಯ ವಿವಿಧ ಕೈಗಾರಿಕೆಗಳು, ಸಂಸ್ಥೆಗಳಿಗೆ ಭೇಟಿ ಕೊಟ್ಟು ಕನ್ನಡ ಅನುಷ್ಠಾನದ ಬಗ್ಗೆ ಪರಿಶೀಲನೆ ನಡೆಸಿದ್ದೇನೆ. ಕೆಲವು ಕಡೆಗಳಲ್ಲಿ ಸಣ್ಣಪುಟ್ಟ ಲೋಪಗಳಿದ್ದು, ಈ ಬಗ್ಗೆ ಸಂಬಂಧಿತ ಸಂಸ್ಥೆಗಳ ಅಧಿಕಾರಿಗಳು ತಪ್ಪು ಒಪ್ಪಿಕೊಂಡು, ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ. ಮುಂದೆ ಜಿಲ್ಲಾಡಳಿತ ಇದರ ಬಗ್ಗೆ ನಿಗಾ ವಹಿಸಲಿದೆ ಎಂದು ಎಂದು ಟಿ.ಎಸ್. ನಾಗಾಭರಣ ಹೇಳಿದರು.

ABOUT THE AUTHOR

...view details