ಮಂಗಳೂರು: ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದ್ದು, ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ತಿಳಿಸಿದ್ದಾರೆ.
ತುಳು ಭಾಷೆ ಸಂವಿಧಾನದ 8ನೇ ಪರಿಚ್ಛೇದ ಸೇರ್ಪಡೆಗೆ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ: ದಯಾನಂದ ಕತ್ತಲ್ ಸಾರ್ - Mangalore News
ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಬೇಕೆಂದು ಸಿಎಂ ಯಡಿಯೂರಪ್ಪ, ಡಿಸಿಎಂ ಡಾ.ಅಶ್ವತ್ಥ ನಾರಾಯಣ, ಸಚಿವ ಸಿ.ಟಿ.ರವಿ, ಶಿಕ್ಷಣ, ಸಚಿವ ಸುರೇಶ್ ಕುಮಾರ್ ಅವರಿಗೆ ಮನವಿ ಮಾಡಿದ್ದೇವೆ. ಎಲ್ಲರೂ ಸಕಾರಾತ್ಮಕವಾಗಿ ಸ್ಪಂದಿಸಿ, ಈ ಬಗ್ಗೆ ಭರವಸೆಯನ್ನೂ ನೀಡಿದ್ದಾರೆಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ತಿಳಿಸಿದ್ದಾರೆ.
ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಬೇಕು. ಜೊತೆಗೆ ತುಳುವನ್ನು ಅಧಿಕೃತ ರಾಜ್ಯಭಾಷೆಯಾಗಿಸಬೇಕು ಎಂಬ ಕೂಗು ಬಹಳ ಕಾಲದಿಂದ ಕೇಳಿ ಬರುತ್ತಿದೆ. ಇದೀಗ ಈ ಪ್ರಕ್ರಿಯೆಗೆ ಮರುಜೀವ ಬಂದಿದ್ದು, ಈ ಬಗ್ಗೆ ಸರ್ಕಾರದ ಗಮನ ಸೆಳೆಯಲು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಇತ್ತೀಚೆಗೆ ಸಿಎಂ ಯಡಿಯೂರಪ್ಪ, ಉಪಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸಿ.ಟಿ.ರವಿ, ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು.
ಎಲ್ಲರೂ ಸಕಾರಾತ್ಮಕವಾಗಿ ಸ್ಪಂದಿಸಿ, ಈ ಬಗ್ಗೆ ಭರವಸೆಯನ್ನೂ ನೀಡಿದ್ದಾರೆ. ಅಲ್ಲದೆ, ಸರ್ಕಾರದ ಗಮನ ಸೆಳೆಯಲು ದ.ಕ.ಜಿಲ್ಲೆಯ ಶಾಸಕರು, ಉಸ್ತುವಾರಿ ಸಚಿವರು ಹಾಗೂ ಸಂಸದರು ಮತ್ತೊಮ್ಮೆ ಮನವಿ ನೀಡುವ ಭರವಸೆ ನೀಡಿದ್ದಾರೆಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಈಟಿವಿ ಭಾರತಕ್ಕೆ ತಿಳಿಸಿದ್ದಾರೆ.