ಕರ್ನಾಟಕ

karnataka

By

Published : Dec 16, 2019, 11:44 PM IST

ETV Bharat / city

ಸ್ಮಾರ್ಟ್‍ಸಿಟಿ ಯೋಜನೆ ಕಾಮಗಾರಿ ಪರಿಶೀಲಿಸುವಂತೆ ಕೋಟ ಶ್ರೀನಿವಾಸ್ ಪೂಜಾರಿ ಸೂಚನೆ

ಸ್ಮಾರ್ಟ್‍ಸಿಟಿ ಯೋಜನೆಯಡಿ ಮಂಗಳೂರಲ್ಲಿ ಕೈಗೊಳ್ಳಲಾಗಿರುವ ಎಲ್ಲಾ ಕಾಮಗಾರಿಗಳನ್ನು ಮಹಾನಗರ ಪಾಲಿಕೆ ಹಾಗೂ ಎನ್.ಐ.ಟಿ.ಕೆ. ಯಿಂದ ಪ್ರತ್ಯೇಕವಾಗಿ ತಾಂತ್ರಿಕ ಪರಿಶೀಲನೆಗೊಳಪಡಿಸಲು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್​ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸ್ಮಾರ್ಟ್‍ಸಿಟಿ ಅನುಷ್ಠಾನ ಮತ್ತು ಪರಿಶೀಲನಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಯಿತು.

ಕೋಟ ಶ್ರೀನಿವಾಸ್ ಪೂಜಾರಿ
ಕೋಟ ಶ್ರೀನಿವಾಸ್ ಪೂಜಾರಿ

ಮಂಗಳೂರು: ಸ್ಮಾರ್ಟ್‍ಸಿಟಿ ಯೋಜನೆಯಡಿ ಮಂಗಳೂರಲ್ಲಿ ಕೈಗೊಳ್ಳಲಾಗಿರುವ ಎಲ್ಲಾ ಕಾಮಗಾರಿಗಳನ್ನು ಮಹಾನಗರಪಾಲಿಕೆ ಹಾಗೂ ಎನ್.ಐ.ಟಿ.ಕೆ. ಯಿಂದ ಪ್ರತ್ಯೇಕವಾಗಿ ತಾಂತ್ರಿಕ ಪರಿಶೀಲನೆಗೊಳಪಡಿಸಲು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್​ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸ್ಮಾರ್ಟ್‍ಸಿಟಿ ಅನುಷ್ಠಾನ ಮತ್ತು ಪರಿಶೀಲನಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಯಿತು.

ಸಭೆಯಲ್ಲಿ ಮಾತನಾಡಿದ ಸಚಿವ ಕೋಟ ಶ್ರೀನಿವಾಸ್​ ಪೂಜಾರಿ, ಸ್ಮಾರ್ಟ್​ ಸಿಟಿ ಒಂದು ನಿಗದಿತ ಅವಧಿಯ ಯೋಜನೆ ಆಗಿರುವುದರಿಂದ ಎಲ್ಲಾ ಕಾಮಗಾರಿಗಳು ಮುಕ್ತಾಯವಾದ ಬಳಿಕ ಮಹಾನಗರ ಪಾಲಿಕೆಗೆ ಹಸ್ತಾಂತರವಾಗಬೇಕಾಗುತ್ತದೆ. ನಂತರ ಯಾವುದೇ ಲೋಪದೋಷಗಳು ಉಂಟಾಗದಂತೆ ನಗರಪಾಲಿಕೆಗೆ ವಹಿಸುವ ಮೊದಲೇ ಕಾಮಗಾರಿಯ ಗುಣಮಟ್ಟ ಪರಿಶೀಲಿಸುವಂತೆ ಸೂಚಿಸಿದರು.

ಮಂಗಳೂರು ಸ್ಮಾರ್ಟ್‍ಸಿಟಿ ಲಿ. ಅಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪೊನ್ನುರಾಜ್ ಅವರು ಮಾತನಾಡಿ, ಸ್ಮಾರ್ಟ್​ ಸಿಟಿ ಯೋಜನೆಯಲ್ಲಿ ಕೈಗೊಳ್ಳಲಾಗಿರುವ ಕಾಮಗಾರಿಗಳನ್ನು ಪೂರ್ಣಗೊಂಡ ನಂತರ ಮಹಾನಗರಪಾಲಿಕೆಗೆ ಹಸ್ತಾಂತರಿಸುವ ಮೊದಲು ಮಹಾನಗರ ಪಾಲಿಕೆ ಹಾಗೂ ಎನ್.ಐ.ಟಿ.ಕೆ. ಸಂಸ್ಥೆಯಿಂದ ಸಮಾನಾಂತರವಾಗಿ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಸ್ಮಾರ್ಟ್​ ಸಿಟಿ ಯೋಜನೆಗಳು ಅನುಷ್ಠಾನ ಸಂದರ್ಭದಲ್ಲಿ ಮಹಾ ನಗರಪಾಲಿಕೆ ಹಾಗೂ ಸ್ಮಾರ್ಟ್‍ಸಿಟಿ ಸಂಸ್ಥೆ ನಡುವೆ ಹೊಂದಾಣಿಕೆ ಇಲ್ಲದೆ ಕೆಲವು ಯೋಜನೆಗಳ ಅನುಷ್ಠಾನದಲ್ಲಿ ವಿಳಂಬವಾಗಿದೆ. ಸಾರ್ವಜನಿಕರಿಗೆ ಉಪಯೋಗವಾಗುವ ಕಾಮಗಾರಿಗಳಿಗೆ ಆದ್ಯತೆ ನೀಡಬೇಕು. ಸ್ಮಾರ್ಟ್ ಶಾಲೆಗಳ ಆಯ್ಕೆ ಸಂದರ್ಭದಲ್ಲಿ ಹೆಚ್ಚು ವಿದ್ಯಾರ್ಥಿಗಳಿರುವ ಶಾಲೆಗಳಿಗೆ ಆದ್ಯತೆ ನೀಡಬೇಕು. ಸ್ಮಾರ್ಟ್ ಬಸ್ ತಂಗುದಾಣದ ವಿನ್ಯಾಸ ಹಾಗೂ ಯೋಜನಾ ವೆಚ್ಚದ ಬಗ್ಗೆ ಸಾರ್ವಜನಿಕರಲ್ಲಿ ವ್ಯಾಪಕ ಅಸಮಾಧಾನ ಇದ್ದು, ಈ ಬಗ್ಗೆ ಜನತೆಗೆ ಉತ್ತರಿಸಲಾಗದ ಪರಿಸ್ಥಿತಿ ಇದೆ ಎಂದು ಶಾಸಕರು ತಿಳಿಸಿದರು.

ಇನ್ನು ಮಂಗಳೂರು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಮುಹಮ್ಮದ್ ನಝೀರ್ ಮಾತನಾಡಿ, ಸ್ಮಾರ್ಟ್‍ ಸಿಟಿ ಯೋಜನೆಯಲ್ಲಿ ಈಗಾಗಲೇ ಸ್ಮಾರ್ಟ್ ರಸ್ತೆಯಲ್ಲಿ ಬರುವ ಸರ್ಕಾರಿ ಕಚೇರಿಗಳಿಗೆ ಎಲ್‍ಇಡಿ ದೀಪಗಳ ಅಳವಡಿಕೆ ಹಾಗೂ ಹಂಪನಕಟ್ಟೆಯಲ್ಲಿ ಗಡಿಯಾರ ಗೋಪುರ ನಿರ್ಮಾಣ ಪೂರ್ಣಗೊಂಡಿದೆ. ನೆಲ್ಲಿಕಾಯಿ ರಸ್ತೆ ಕಾಮಗಾರಿ ಮುಕ್ತಾಯಗೊಂಡಿದ್ದು, ಮಿಷನ್ ಸ್ಟೀಟ್ ರಸ್ತೆಯಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ನಗರದ ವಿವಿದೆಡೆ 14 ಸ್ಮಾರ್ಟ್ ಬಸ್ ತಂಗುದಾಣಗಳನ್ನು ನಿರ್ಮಿಸಲಾಗಿದೆ. ಕಾಮಗಾರಿಗಳನ್ನು ಲೋಕೋಪಯೋಗಿ ಇಲಾಖೆಯ ಎಸ್.ಆರ್. ದರದಂತೆ ನಡೆಸಲಾಗುತ್ತಿದೆ ಎಂದರು.

ABOUT THE AUTHOR

...view details