ಮಂಗಳೂರು : ಲಾಕ್‌ಡೌನ್ ನಾಳೆ ಮುಗಿಯುತ್ತದೆ. ಆದರೆ ನಮ್ಮಲ್ಲಿ ಅನೇಕ ಜನಪ್ರತಿನಿಧಿಗಳು, ಸಾರ್ವಜನಿಕ ವಲಯದಲ್ಲಿ ಇನ್ನೂ 14 ದಿನಗಳ ಕಾಲ ಜಿಲ್ಲೆಯಲ್ಲಿ ಲಾಕ್‌ಡೌನ್ ಮುಂದುವರಿಸುವಂತೆ ಸಲಹೆ ನೀಡುತ್ತಿದ್ದಾರೆ. ಆದರೆ ನಾನು ಹೇಳುವ ಪ್ರಕಾರ ಲಾಕ್‌ಡೌನ್ ಒಂದೇ ಪರಿಹಾರವಲ್ಲ. ಹಾಗಾಗಿ ಇವತ್ತು ಸಂಜೆಯೊಳಗೆ ಮಾತುಕತೆ ನಡೆಸಿ ಅಂತಿಮ ತೀರ್ಮಾನವನ್ನು ಸಿಎಂ ನೀಡಲಿದ್ದಾರೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಆಧಾರ್ ಕಾರ್ಡ್ ತೋರಿಸಿದರೂ ಕೋವಿಡ್ ಚಿಕಿತ್ಸೆ ಉಚಿತ:
ಕೊರೊನಾ ಸೋಂಕಿತರ ಚಿಕಿತ್ಸೆಗೆ ಸಂಬಂಧಿಸಿ ಜಿಲ್ಲೆಯಲ್ಲಿ 9 ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಉಚಿತವಾದ ಕೋವಿಡ್ ಚಿಕಿತ್ಸೆಗೆ ಬೇಕಾದ ವ್ಯವಸ್ಥೆಗಳನ್ನು ಈಗಾಗಲೇ ಮಾಡಲಾಗಿದೆ. ಆಯಷ್ಮಾನ್ ಭಾರತ್ ಹೊಂದಾಣಿಕೆಯಲ್ಲಿ ಯಾರೇ ಆದರೂ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯಬಹುದು. ಎಪಿಎಲ್, ಬಿಪಿಎಲ್ ಅಥವಾ ಕನಿಷ್ಠ ಆಧಾರ್ ಕಾರ್ಡ್ ಇದ್ದರೆ ಸಾಕು, ಉಚಿತ ಚಿಕಿತ್ಸೆ ನೀಡಲಾಗುವುದು. ಜೊತೆಗೆ ಜಿಲ್ಲೆಗೆ 25 ಸಾವಿರ ಪರೀಕ್ಷಾ ಕಿಟ್‌ಗಳನ್ನು ಮತ್ತು 50 ವೆಂಟಿಲೇಟರ್ ಹಾಗೂ ಪಿಪಿಇ ಕಿಟ್‌ಗಳನ್ನು ಕೂಡಾ ಕೊಡಿಸಲಾಗುತ್ತಿದೆ ಎಂದು ತಿಳಿಸಿದರು.
ಪುತ್ತೂರು, ಸುಳ್ಯದಲ್ಲಿ ಕೋವಿಡ್ ಸೋಂಕಿತರಿಗೆ ಹಾಸ್ಟೇಲ್: