ಸುಬ್ರಹ್ಮಣ್ಯ(ದಕ್ಷಿಣ ಕನ್ನಡ):ಐತಿಹಾಸಿಕ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ಸಂಪೂರ್ಣವಾಗಿ ಲಾಕ್ ಡೌನ್ ಆಗಿದ್ದು, ಜನರ ಪ್ರವೇಶವನ್ನು ಜಿಲ್ಲಾಡಳಿತ ನಿರ್ಬಂಧಿಸಿದೆ. ಆದರೆ ರಾಜ್ಯದ ಹಲವೆಡೆ ಲಾಕ್ ಡೌನ್ ಸಡಿಲಿಕೆಯಾದ ಹಿನ್ನೆಲೆ ಪ್ರವಾಸಿಗರು ಕುಕ್ಕೆಗೆ ಆಗಮಿಸುತ್ತಿದ್ದು, ಇದು ಪೊಲೀಸರಿಗೆ ಬಹುದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅಲ್ಲದೆ ಪ್ರವಾಸಿಗರು ದಂಡವನ್ನು ಪಾವತಿಸುವಂತಾಗಿದೆ.
ಪ್ರವಾಸಿಗರೇ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುವ ಮುನ್ನ ಎಚ್ಚರ..! ಕಾರಣ ಇಲ್ಲಿದೆ ನೋಡಿ - ದಕ್ಷಿಣ ಕನ್ನಡ ಜಿಲ್ಲೆ ಲಾಕ್ಡೌನ್
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 17 ಗ್ರಾಮಗಳಲ್ಲಿ ಸಂಪೂರ್ಣ ಲಾಕ್ ಡೌನ್ ವಿಧಿಸಲಾಗಿದೆ. ಆದರೆ ರಾಜ್ಯದ ಬೇರೆ ಬೇರೆ ಭಾಗದಲ್ಲಿ ಲಾಕ್ ಡೌನ್ ಸಡಿಲಿಕೆ ಇರುವ ಕಾರಣ ಖಾಸಗಿ ವಾಹನಗಳ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವವರು ದಂಡ ಕಟ್ಟಬೇಕಾದ ಪರಿಸ್ಥಿತಿ ಇದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಆದೇಶ ಪ್ರಕಾರ ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಜಿಲ್ಲೆಯ 17 ಗ್ರಾಮಗಳಲ್ಲಿ ಸಂಪೂರ್ಣ ಲಾಕ್ ಡೌನ್ ವಿಧಿಸಲಾಗಿದೆ. ಆದರೆ ರಾಜ್ಯದ ಬೇರೆ ಬೇರೆ ಭಾಗದಲ್ಲಿ ಲಾಕ್ ಡೌನ್ ಸಡಿಲಿಕೆ ಇರುವ ಕಾರಣ ಖಾಸಗಿ ವಾಹನಗಳ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ತಪಾಸಣಾ ಕೇಂದ್ರಗಳಲ್ಲಿ ಪ್ರವಾಸಿಗರನ್ನು ತಡೆಯಲಾಗುತ್ತಿದ್ದರೂ ಕೆಲವು ಗುಪ್ತ ಮಾರ್ಗಗಳನ್ನು ಬಳಸಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಜನರು ಆಗಮಿಸುತ್ತಿದ್ದಾರೆ. ಇದು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ.
ಯಾವುದೇ ಕಾರಣಕ್ಕೂ ಮೇಲಧಿಕಾರಿಗಳ ಆದೇಶ ಹೊರತು ಪಡಿಸಿ ಗ್ರಾಮಕ್ಕೆ ಪ್ರವೇಶ ಮಾಡಿದರೆ ಅಥವಾ ಗ್ರಾಮದಲ್ಲಿ ಸುತ್ತಾಡಿದರೆ ದಂಡ ವಿಧಿಸುವುದರ ಜೊತೆಗೆ ಪ್ರಕರಣ ದಾಖಲು ಮಾಡಲಾಗುವುದು ಮತ್ತು ಲಾಕ್ ಡೌನ್ ಸಡಿಲಿಕೆ ಆಗುವವರೆಗೂ ಯಾವುದೇ ಪ್ರವಾಸಿಗರೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ಪ್ರವೇಶ ಮಾಡಬಾರದೆಂದು ಪೊಲೀಸರು ಹಾಗೂ ಸ್ಥಳಿಯಾಡಳಿತ ಎಚ್ಚರಿಕೆ ನೀಡಿದೆ.