ಮಂಗಳೂರು: ಮಳಲಿ ಮಸೀದಿ ನವೀಕರಣ ಸಂದರ್ಭದಲ್ಲಿ ದೇಗುಲ ಪತ್ತೆಯಾದ ಬಳಿಕ ಉಂಟಾಗಿರುವ ಗೊಂದಲಗಳ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲು ಆಸ್ಪದ ನೀಡುವುದಿಲ್ಲ ಎಂದು ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್ ಕುಮಾರ್ ತಿಳಿಸಿದ್ದಾರೆ. ಎಡಿಜಿಪಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ನಗರಕ್ಕೆ ಆಗಮಿಸಿದ ಅವರು, ಇಂದು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮಳಲಿ ಮಸೀದಿ ವಿಚಾರ ಈಗ ನ್ಯಾಯಾಲಯದಲ್ಲಿದೆ. ಜೂನ್ 3ರವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳಲು ನ್ಯಾಯಾಲಯವು ಆದೇಶಿಸಿದೆ. ಆ ನಿಟ್ಟಿನಲ್ಲಿ ಈ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕಾನೂನು ಕ್ರಮ ವಹಿಸಲಾಗಿದೆ ಎಂದರು.