ಕರ್ನಾಟಕ

karnataka

ETV Bharat / city

ಅಕ್ರಮವಾಗಿ 30 ಲಕ್ಷ ರೂ. ಮೌಲ್ಯದ ಚಿನ್ನ ಸಾಗಾಟ: ಮಂಗಳೂರು ಏರ್​​ಪೋರ್ಟ್​ನಲ್ಲಿ ಪ್ರಯಾಣಿಕನ ಬಂಧನ - ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಚಿನ್ನ ಸಾಗಾಟ

ಮಂಗಳೂರು ವಿಮಾನ ನಿಲ್ದಾಣಕ್ಕೆ ದುಬೈನಿಂದ ಬಂದ ಪ್ರಯಾಣಿಕರನ್ನು ತಪಾಸಣೆ ಮಾಡುತ್ತಿದ್ದಾಗ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

man-arrested-for-smuggling-gold
ಆರೋಪಿ ಬಂಧನ

By

Published : Jan 30, 2021, 10:32 PM IST

ಮಂಗಳೂರು:ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 30 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣಕ್ಕೆ ದುಬೈನಿಂದ ಬಂದ ಪ್ರಯಾಣಿಕನ್ನು ತಪಾಸಣೆ ನಡೆಸುತ್ತಿದ್ದಾಗ ಕೇರಳದ ಕಾಸರಗೋಡು ನಿವಾಸಿ ಮಸ್ಕೂರ್ ಕಲ್ಲಾರ್ ಎಂಬಾತ ತನ್ನ ಗುದನಾಳದಲ್ಲಿ ಪೇಸ್ಟ್ ರೂಪದಲ್ಲಿ ಚಿನ್ನವನ್ನು ಅಡಗಿಸಿಟ್ಟು ಸಾಗಾಟ ಮಾಡುತ್ತಿದ್ದದ್ದು ಪತ್ತೆಯಾಗಿದೆ.

ಸದ್ಯ ಆರೋಪಿಯಿಂದ 30 ಲಕ್ಷ ರೂ. ಮೌಲ್ಯದ 587 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದ್ದು, ವಿಚಾರಣೆ ಮುಂದುವರೆದಿದೆ.

ABOUT THE AUTHOR

...view details