ಮಂಗಳೂರು: ವ್ಯಕ್ತಿಯೊಬ್ಬರಿಗೆ ದುಷ್ಕರ್ಮಿಗಳು ಚೂರಿ ಇರಿದು ಪರಾರಿಯಾಗಿರುವ ಘಟನೆ ನಗರದ ಮಾಲಾಡಿ ಬಳಿ ಬುಧವಾರ ರಾತ್ರಿ ನಡೆದಿದೆ.
ಮಂಗಳೂರು: ನಡುರಸ್ತೆಯಲ್ಲಿ ವ್ಯಕ್ತಿಗೆ ಚೂರಿ ಇರಿದು ದುಷ್ಕರ್ಮಿಗಳು ಪರಾರಿ - ಮಂಗಳೂರಿನ ಮಾಲೆಮಾರ್
ಮಂಗಳೂರಿನ ಮಾಲಾಡಿ ಬಳಿ ನಿನ್ನೆ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ವ್ಯಕ್ತಿಗೆ ಅಪರಿಚಿತ ದುಷ್ಕರ್ಮಿಗಳು ಚೂರಿ ಇರಿದು ಪರಾರಿಯಾಗಿದ್ದಾರೆ.
ಚೂರಿ ಇರಿದು ದುಷ್ಕರ್ಮಿಗಳು ಪರಾರಿ
ಪಂಜಿಮೊಗರು ನಿವಾಸಿ ರಾಜೇಶ್ (45) ಚೂರಿ ಇರಿತದಿಂದ ಗಾಯಗೊಂಡಿದ್ದಾರೆ. ರಾಜೇಶ್ ಎಂದಿನಂತೆ ನಿನ್ನೆ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ವೇಳೆ ಮಾಲಾಡಿ ಬಳಿ ಅಪರಿಚಿತ ದುಷ್ಕರ್ಮಿಗಳು ಬೆನ್ನಿಗೆ ಚೂರಿ ಇರಿದು ಪರಾರಿಯಾದರು.
ಗಾಯಗೊಂಡಿದ್ದ ರಾಜೇಶ್ ಅವರನ್ನು ಸ್ಥಳೀಯರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಪಕ್ಕೆಲುಬು ಮತ್ತು ಸೊಂಟದ ಭಾಗಗಳಿಗೆ ಗಾಯವಾಗಿದೆ. ಈ ಕುರಿತು ಕಾವೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಶೋಧ ಕಾರ್ಯ ನಡೆಸುತ್ತಿದ್ದಾರೆ.
Last Updated : Oct 14, 2021, 12:01 PM IST