ಮಂಗಳೂರು (ದಕ್ಷಿಣಕನ್ನಡ) :ದ್ವಿಚಕ್ರ ವಾಹನಕ್ಕೆ ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಜಪ್ಪಿನಮೊಗರು ಸಮೀಪದ ನಡುಮೊಗರು ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕೊಣಾಜೆ ರೊನಾಲ್ಡ್ (59) ಎಂದು ಗುರುತಿಸಲಾಗಿದೆ.
ಮಂಗಳೂರಿನಲ್ಲಿ ಕೆಲಸ ಮುಗಿಸಿ ಕೊಣಾಜೆಯಲ್ಲಿರುವ ತನ್ನ ಮನೆಗೆ ದ್ವಿಚಕ್ರ ವಾಹನದಲ್ಲಿ ಹಿಂತಿರುಗುತ್ತಿದ್ದ ವೇಳೆ ಅತೀ ವೇಗವಾಗಿ ಬಂದ ಲಾರಿಯು ದ್ವಿಚಕ್ರ ವಾಹನದ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಇದರಿಂದ ದ್ವಿಚಕ್ರ ವಾಹನ ಸವಾರ ಲಾರಿಯಡಿಗೆ ಸಿಲುಕಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.