ಮಂಗಳೂರು: ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನವನ್ನು ಗುದದ್ವಾರದೊಳಗೆ ಪೇಸ್ಟ್ ರೂಪದಲ್ಲಿ ಇಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಈತನನ್ನು ಕಸ್ಟಮ್ಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಈತ ದೇಹದೊಳಗೆ ಮರೆಮಾಚಿ ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.