ಕರ್ನಾಟಕ

karnataka

ETV Bharat / city

ಆ. 7 ರಿಂದ 11ರವರೆಗೆ ಮಂಗಳೂರು-ಚಿಕ್ಕಮಗಳೂರು ರಸ್ತೆ ಸಂಚಾರ ಬಂದ್​​​ - ದಕ್ಷಿಣ ಕನ್ನಡ ಜಿಲ್ಲೆ ಮಳೆ ವರದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣನ ಅಬ್ಬರ ಮುಂದುವರೆದಿದ್ದು, ಬೆಳ್ತಂಗಡಿ ತಾಲೂಕಿನ ಹಲವು ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಅಲ್ಲದೆ ಮಂಗಳೂರು-ಚಿಕ್ಕಮಗಳೂರು ರಸ್ತೆಯಲ್ಲಿ ಭೂಕುಸಿತ ಉಂಟಾಗಿದ್ದು, ಆ. 7 ರಿಂದ 11ನೇ ತಾರೀಖಿನವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

mangalore-chikkamagalore-road-closed
ಬೆಳ್ತಂಡಗಿ ಭಾಗದಲ್ಲಿ ಭಾರಿ ಮಳೆ

By

Published : Aug 7, 2020, 9:08 PM IST

ಬೆಳ್ತಂಗಡಿ: ಕಳೆದ ರಾತ್ರಿಯಿಂದ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು, ತಾಲೂಕಿನ ಹಲವು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಇದರಿಂದ ನೆರೆ ಮತ್ತೊಮ್ಮೆ ಮರುಕಳಿಸಬಹುದೇ ಎನ್ನುವ ಆತಂಕದಲ್ಲಿ ಜನರಿದ್ದಾರೆ.

ಬೆಳ್ತಂಡಗಿ ಭಾಗದಲ್ಲಿ ಭಾರಿ ಮಳೆ

ಚಾರ್ಮಾಡಿಯ ಅಂತರ ಎಂಬಲ್ಲಿ ಸಂಪರ್ಕ ಸೇತುವೆ ಕಡಿತಗೊಂಡಿದೆ. ಅಲ್ಲದೆ ಮಂಗಳೂರು-ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಅಲ್ಲಲ್ಲಿ ಭೂಕುಸಿತಗಳು ಸಂಭವಿಸುತ್ತಿದ್ದು, ಆ.7 ರಿಂದ 11 ನೇ ತಾರೀಖಿನವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಶಿಶಿಲ ನದಿಯು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು ಸೇತುವೆಯಲ್ಲಿ ಸಿಲುಕಿಕೊಂಡಿರುವ ಮರ, ಕಸಕಡ್ಡಿಗಳನ್ನು ಜೆಸಿಬಿ ಮೂಲಕ ತೆಗೆದು ನೀರು ಸರಾಗವಾಗಿ ಹರಿಯಲು ವ್ಯವಸ್ಥೆ ಮಾಡಲಾಗುತ್ತಿದೆ.

ABOUT THE AUTHOR

...view details