ಮಂಗಳೂರು:ಮಹಾನಗರ ಪಾಲಿಕೆಯ 60 ವಾರ್ಡ್ಗಳಿಗೆ ಚುನಾವಣೆ ನಡೆಯುತ್ತಿದ್ದು, ಅಂತಿಮವಾಗಿ 180 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.
ಚುನಾವಣೆಗೆ ಇನ್ನು ಕೇವಲ 11 ದಿನಗಳು ಮಾತ್ರ ಬಾಕಿ ಇದ್ದು, ಅಭ್ಯರ್ಥಿಗಳು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.

ಸೋಮವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು. ಹೀಗಾಗಿ 11 ಮಂದಿ ಸ್ಪರ್ಧಾ ಕಣದಿಂದ ಹಿಂದೆ ಸರಿದಿದ್ದಾರೆ. ಅಂತಿಮವಾಗಿ 180 ಮಂದಿ ಚುನಾವಣಾ ಅಖಾಡದಲ್ಲಿದ್ದಾರೆ.
ಕಾಂಗ್ರೆಸ್- 60, ಬಿಜೆಪಿ-60, ಜೆಡಿಎಸ್-12, ಸಿಪಿಐ-1, ಸಿಪಿಎಂ-7, ಎಸ್ಡಿಪಿಐ-6, ಜೆಡಿಯು-2, ಡಬ್ಲ್ಯೂಪಿಐ-3, ಕರ್ನಾಟಕ ರಾಷ್ಟ್ರ ಸಮಿತಿ-2 ಹಾಗೂ ಪಕ್ಷೇತರರಾಗಿ -27 ಮಂದಿ ಅಂತಿಮ ಕಣದಲ್ಲಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.