ಮಂಗಳೂರು/ ಚಿಕ್ಕಮಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಇಂದು ಐವರು ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಸೋಂಕಿನಿಂದ ಮೃತರ ಸಂಖ್ಯೆ 624ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇಂದು 220 ಮಂದಿಗೆ ಕೊರೊನಾ ತಗುಲಿದ್ದು, ಈವರೆಗೆ 27,959 ಮಂದಿಗೆ ಸೋಂಕು ದೃಢಪಟ್ಟಿದೆ. 391 ಮಂದಿ ಗುಣಮುಖರಾಗಿದ್ದು, ಈವರೆಗೆ 23,804 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಜಿಲ್ಲೆಯಲ್ಲಿ 3,531 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಒಟ್ಟಾರೆಯಾಗಿ 2,17,005 ಮಂದಿಯ ತಪಾಸಣೆ ನಡೆಸಲಾಗಿದೆ. ಇದರಲ್ಲಿ 1,89,046 ನೆಗೆಟಿವ್ ಬಂದಿವೆ. ಜಿಲ್ಲೆಯಲ್ಲಿ ಈವರೆಗೆ 7,784 ಮಾಸ್ಕ್ ಉಲ್ಲಂಘನೆ ಪ್ರಕರಣ ದಾಖಲಾಗಿ, ಅವರಿಂದ 9,17,225 ರೂ. ದಂಡ ವಸೂಲಿ ಮಾಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಶುಕ್ರವಾರ 101 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಒಟ್ಟು ಕೊರೊನಾ ಪೀಡಿತರ ಸಂಖ್ಯೆ 11,265ಕ್ಕೆ ಏರಿಕೆಯಾಗಿದೆ. 142 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೂ ಒಟ್ಟು 9,894 ಸೋಂಕಿತರು ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ.
ಚಿಕ್ಕಮಗಳೂರು- 15, ಕಡೂರು- 29, ಮೂಡಿಗೆರೆ- 13, ತರೀಕೆರೆ- 18, ಶೃಂಗೇರಿ- 03, ಕೊಪ್ಪ- 22, ಎನ್ಆರ್ ಪುರ - 04 ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ. ಈವರೆಗೂ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 134ಕ್ಕೆ ಏರಿಕೆಯಾಗಿದ್ದು, ಒಟ್ಟು 1,095 ಸಕ್ರಿಯ ಪ್ರಕರಣಗಳಿವೆ.