ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆದ ಹಿಂಸಾಚಾರದ ಬಗ್ಗೆ ಯಾವುದೇ ಫೋಟೋ ಹಾಗೂ ವಿಡಿಯೋ ದಾಖಲೆಗಳಿದ್ದಲ್ಲಿ ಶೇರ್ ಮಾಡಿ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ. ಪಿ. ಎಸ್. ಹರ್ಷ ಟ್ವಿಟ್ಟರ್ ಮೂಲಕ ಮನವಿ ಮಾಡಿದ್ದಾರೆ.
ಮಂಗಳೂರು ಹಿಂಸಾಚಾರ: ಸತ್ಯ ತನಿಖೆಗೆ ವಿಡಿಯೋ ಶೇರ್ ಮಾಡಿ ಎಂದ ಪೊಲೀಸ್ ಆಯುಕ್ತರು - ಮಂಗಳೂರು ಹಿಂಸಾಚಾರ
ನಗರದಲ್ಲಿ ನಡೆದ ಪೌರತ್ವ ಕಾಯ್ದೆಯ ವಿರುದ್ಧದ ಹಿಂಸಾಚಾರದಲ್ಲಿ ಇಬ್ಬರು ಬಲಿಯಾದ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿದೆ. ಅಲ್ಲದೆ ಮ್ಯಾಜಿಸ್ಟ್ರೇಟ್ ನೇತೃತ್ವದ ತನಿಖೆಯೂ ನಡೆಯಲಿದೆ. ಅದಕ್ಕಾಗಿ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಲು ನಗರ ಪೊಲೀಸ್ ಆಯುಕ್ತರು ಸಾರ್ವಜನಿಕರ ಸಹಕಾರಕ್ಕಾಗಿ ಟ್ವೀಟ್ ಮಾಡಿದ್ದಾರೆ.
ಕಳೆದ ಗುರುವಾರ ನಡೆದಿದ್ದ ಗಲಭೆಯಲ್ಲಿ ಇಬ್ಬರು ಸಾವನ್ನಪ್ಪಿರುವ ಬಗ್ಗೆ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿದೆ. ಅಲ್ಲದೆ ಮ್ಯಾಜಿಸ್ಟ್ರೇಟ್ ನೇತೃತ್ವದ ತನಿಖೆಯೂ ನಡೆಯಲಿದೆ. ಅದಕ್ಕಾಗಿ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಲು ಪೊಲೀಸ್ ಆಯುಕ್ತರು ಸಾರ್ವಜನಿಕರ ಸಹಕಾರಕ್ಕಾಗಿ ಟ್ವೀಟ್ ಮಾಡಿದ್ದಾರೆ.
ಗಲಭೆಗಳಿಗೆ ಸಂಬಂಧಿಸಿದಂತೆ ಯಾವುದೇ ಫೋಟೋ ಅಥವಾ ವಿಡಿಯೋ ಇದ್ದಲ್ಲಿ mangalurunorthmgc@gmail.com ಈ-ಮೇಲ್ ಮಾಡಲು ಅಥವಾ 9480802327 ಗೆ ವಾಟ್ಸ್ಯಾಪ್ ಸಂದೇಶಗಳನ್ನು ಕಳುಹಿಸಲು ನಾನು ಮನವಿ ಮಾಡುತ್ತೇನೆ. ಇದು ಸತ್ಯವನ್ನು ಎತ್ತಿಹಿಡಿಯುವಲ್ಲಿ ತನಿಖಾ ತಂಡಕ್ಕೆ ಸಹಾಯ ಮಾಡುತ್ತದೆ ಎಂದು ನಗರ ಪೊಲೀಸ್ ಆಯುಕ್ತರು ಮನವಿ ಮಾಡಿದ್ದಾರೆ.