ಮಂಗಳೂರು :ಸೇನಾ ಹೆಲಿಕಾಪ್ಟರ್ ಪತನದ ಸಂದರ್ಭದಲ್ಲಿ ಸಿಡಿಎಸ್ ಬಿಪಿನ್ ರಾವತ್ ಅವರ ಬಗ್ಗೆ ಅವಹೇಳನಕಾರಿಯಾಗಿ ಫೇಸ್ಬುಕ್ನಲ್ಲಿ ಕಮೆಂಟ್ ಹಾಕಿದವರ ಮೇಲೆ ತನಿಖೆ ಮುಂದುವರೆದಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ಅವಹೇಳನಕಾರಿ ಎಫ್‌ಬಿ ಸ್ಟೇಟಸ್ ಹಾಕಿದವರ ವಿರುದ್ಧದ ತನಿಖೆ ಕುರಿತಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಪ್ರತಿಕ್ರಿಯೆ ನೀಡಿರುವುದು.. ಮಂಗಳೂರಿನಲ್ಲಿ ಮಾತನಾಡಿದ ಅವರು, ಸೇನಾ ಹೆಲಿಕಾಪ್ಟರ್ ಪತನದ ಸಂದರ್ಭದಲ್ಲಿ ಹಲವರು ಸಿಡಿಎಸ್ ಬಿಪಿನ್ ರಾವತ್ ಅವರ ಬಗ್ಗೆ ಅವಹೇಳನಕಾರಿ ಕಮೆಂಟ್ ಮಾಡಿರುವುದು ಗಮನಕ್ಕೆ ಬಂದಿದೆ.
ಫೇಸ್ಬುಕ್ನಲ್ಲಿ ಹಲವು ಫೇಕ್ ಅಕೌಂಟ್ಗಳ ಮೂಲಕ ಬರೆಯಲಾಗಿದೆ. ಇದನ್ನು ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ಈ ಕಾರಣದಿಂದ ಇದರ ಮಾಹಿತಿ ನೀಡುವಂತೆ ಫೇಸ್ಬುಕ್ಗೆ ಪತ್ರ ಬರೆಯಲಾಗಿದೆ ಎಂದರು.
ಫೇಸ್‌ಬುಕ್ ಖಾತೆಯಲ್ಲಿ ಅವಹೇಳನಕಾರಿ ಕಮೆಂಟ್ ಮಾಡಿದ ಇಬ್ಬರ ಬಗ್ಗೆ ಮಾಹಿತಿ ಪಡೆಯಲು ಯಶಸ್ವಿಯಾಗಿದ್ದೇವೆ. ಅವರನ್ನು ಶೀಘ್ರದಲ್ಲೇ ವಶಕ್ಕೆ ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಇದನ್ನೂ ಓದಿ:ಬಿಪಿನ್ ರಾವತ್ ಬಗ್ಗೆ ಅವಹೇಳನಕಾರಿ ಪೋಸ್ಟ್: ಬೆಂಗಳೂರಲ್ಲಿ ಅರೆಸ್ಟ್