ಮಂಗಳೂರು: ಕೋಡಿಕೆರೆ ಮನೋಜ್ ಸೇರಿದಂತೆ ನಾಲ್ವರು ರೌಡಿಶೀಟರ್ಗಳ ಕೊಲೆಗೆ ಯೋಜನೆ ರೂಪಿಸಿದ ಆರೋಪದ ಮೇಲೆ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ರೌಡಿಶೀಟರ್ ಆಕಾಶಭವನ ಶರಣ್ ನನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ನಿನ್ನೆ ಆಕಾಶಭವನ ಶರಣ್ ನನ್ನು ಮಂಗಳೂರು ಪೊಲೀಸ್ ವಶಕ್ಕೆ ನೀಡಲಾಗಿದೆ. ಒಂದು ವಾರಗಳ ಕಾಲ ತನಿಖೆ ನಡೆಸಲಾಗುತ್ತದೆ. ಅಲ್ಲದೇ, ಆಕಾಶ್ನಿಗೆ ಸಂಬಂಧಪಟ್ಟ ಡೀಲ್ ಗಳನ್ನು ಆತನ ಅನುಪಸ್ಥಿತಿಯಲ್ಲಿ ಅವನ ತಮ್ಮ ಧೀರಜ್ ನಡೆಸುತ್ತಿದ್ದ ಎಂಬ ಆರೋಪದ ಮೇಲೆ ಅವನನ್ನು ವಶಕ್ಕೆ ಪಡೆದುಕೊಂಡು ವಿಚಾರಿಸಲಾಗುತ್ತಿದೆ.
ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಆಕಾಶಭವನ ಶರಣ್ ಮೇಲೆ 21 ಪ್ರಕರಣಗಳು ದಾಖಲಾಗಿವೆ. ಸದ್ಯ ಬಂಟ್ವಾಳದಲ್ಲಿ ನಡೆದ ಕೊಲೆ ಪ್ರಕರಣ ಸಂಬಂಧ ಜೈಲಿನಲ್ಲಿದ್ದಾನೆ. ಈ ಎಲ್ಲ ಪ್ರಕರಣಗಳನ್ನು ಆತ ಜೈಲಿನೊಳಗಿದ್ದೇ ಮಾಡಿದ್ದಾನೆ ಎಂದು ತನಿಖೆಯಿಂದ ತಿಳಿದು ಬಂದಿದೆ.
ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್. ಮಾತನಾಡಿ, ಮಾ.17ರಂದು ಎರಡು ದರೋಡೆ ಪ್ರಕರಣಗಳು ದಾಖಲಾಗಿತ್ತು. ಈ ಪ್ರಕರಣದಲ್ಲಿ 9ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ. ಇದಕ್ಕಿಂತ ಹಿಂದೆ ಡಿಸಿಪಿ ಹರಿರಾಂ ಶಂಕರ್ ತಲಪಾಡಿಯಲ್ಲಿ ಮರಳು ಸಾಗಾಟದ ಲಾರಿಯೊಂದನ್ನು ತಡೆದು ಪರಿಶೀಲನೆ ನಡೆಸಿದ್ದರು.