ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆದಿತ್ಯರಾವ್ ಶರಣಾದ ಬೆನ್ನಲ್ಲೇ ಆತನನ್ನು ಅಜ್ಞಾತ ಸ್ಥಳಕ್ಕೆ ಪೊಲೀಸರು ಕರೆದೊಯ್ದಿದ್ದಾರೆ.
ಬೆಂಗಳೂರಿಗೆ ಆಗಮಿಸಲಿದೆ ಮಂಗಳೂರು ಪೊಲೀಸರ ತಂಡ, ಅಜ್ಞಾತ ಸ್ಥಳದಲ್ಲಿ ವಿಚಾರಣೆ - ಆರೋಪಿ ಆದಿತ್ಯರಾವ್ ಪೊಲೀಸರಿಗೆ ಶರಣು
ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆದಿತ್ಯರಾವ್ ಶರಣಾದ ಬೆನ್ನಲ್ಲೇ ಆತನನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ.

ಬೆಂಗಳೂರಿಗೆ ಆಗಮಿಸಲಿದೆ ಮಂಗಳೂರು ಪೊಲೀಸರ ತಂಡ
ಆರೋಪಿ ಆದಿತ್ಯರಾವ್ ಬೆಂಗಳೂರಿನಲ್ಲಿ ಪೊಲೀಸರಿಗೆ ಶರಣಾದ ಹಿನ್ನೆಲೆಯಲ್ಲಿ ಮಂಗಳೂರಿನಿಂದ ಪೊಲೀಸರ ತಂಡ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದೆ. ಈ ಬಗ್ಗೆ ಮಂಗಳೂರು ಪೊಲೀಸ್ ಕಮೀಷನರ್ ಡಾ. ಪಿ.ಎಸ್.ಹರ್ಷ ಟ್ವೀಟ್ ಮಾಡಿದ್ದಾರೆ.
ಬೆಂಗಳೂರಿನ ನೃಪತುಂಗ ರಸ್ತೆ ಬಳಿ ಇರುವ ಡಿಜಿ-ಐಜಿಪಿ ಕಚೇರಿಗೆ ಆರೋಪಿ ಆದಿತ್ಯರಾವ್ ಬೆಳಗ್ಗೆ 7 ಗಂಟೆಗೆ ಆಗಮಿಸಿ ಶರಣಾಗಿದ್ದಾನೆ. ಈ ಹಿಂದೆಯೂ ಈತ ವಿಮಾನ ನಿಲ್ದಾಣಗಳಿಗೆ ಹುಸಿ ಬಾಂಬ್ ಕರೆ ಮಾಡಿ ಪೊಲೀಸರಿಗೆ ಕೈಗೆ ಸಿಕ್ಕಿಬಿದ್ದಿದ್ದ. ಸದ್ಯ ಆರೋಪಿಯನ್ನು ಹಲಸೂರು ಗೇಟ್ ಠಾಣೆ ಪೊಲೀಸ್ರು ವಶಕ್ಕೆ ಪಡೆದಿದ್ದು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಯಲಿದೆ.